Rain Alert: ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ: ಯಾವಾಗ ಗೊತ್ತಾ? ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್‌ 05: ಬಿರು ಬಿಸಿಲ ತಾಪಮಾನದಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಕೊನೆಗೂ ಹವಾಮಾನ ಇಲಾಖೆ ಕೊಟ್ಟ ಮಾಹಿತಿಯಿಂದಾಗಿ ನಿಟ್ಟುಸಿರು ಬಿಟ್ಟಂತಾಗಿದೆ. ರಾಜ್ಯದ ಬಹುತೇಕ ಕಡೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಏಪ್ರಿಲ್‌ ಆರಂಭದಿಂದಲೂ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದೆ.

ಏಪ್ರಿಲ್‌ ಮೊದಲ ವಾರದಲ್ಲಿ ದಾವಣಗೆರೆ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಮಳೆಯಾಗುತ್ತಿದ್ದು, ಕಾದ ಕಾವಲಿಯಂತಾಗಿದ್ದ ಭೂಮಿಗೆ ಸುರಿದ ವರುಣ ತಂಪೆರೆದಿದ್ದಾನೆ. ಇನ್ನೂ ಕರ್ನಾಟಕದ 25 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್​ 8ರ ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain 25 Districts Will Receive Heavy Rainfall From April 8

ಏಪ್ರಿಲ್ 6 ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನ ನೀಡಿದ್ದು, ಹಲವು ಜನತೆ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಏಪ್ರಿಲ್​ 8 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಇನ್ನೂ ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯಲ್ಲಿ ಬುಧವಾರ ವರ್ಷ ಮೊದಲ ಮಳೆಯಿಂದಾಗಿ ಜನರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು 45 ನಿಮಿಷ ಸುರಿದ ಮಳೆಯಿಂದಾಗಿ ದಾವಣಗೆರೆ ಜನತೆ ಕುಣಿದು ಕುಪ್ಪಳಿಸಿದ್ದಾರೆ. ಏಪ್ರಿಲ್​ 9 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಯಾದಗಿರಿ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮುಂದಿನ 3 ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತಷ್ಟು ಹೆಚ್ಚಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+