Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆ ಮುನ್ಸೂಚನೆ, ಇಲ್ಲಿದೆ ವಿವರ
ಕರ್ನಾಟಕ, ಮೇ, 20: ರಾಜ್ಯದ ಹಲವೆಡೆ ಇಂದಿನಿಂದ 5 ದಿನಗಳ ಕಾಲ ಮಳೆರಾಯ ಆರ್ಭಟಿಸಲಿದ್ದು, ಇನ್ನು ಕೆಲವೆಡೆ ಒಣಹವೆ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಮಳೆ ಪಡೆಯಲಿರುವ ಜಿಲ್ಲೆಗಳು ಮತ್ತು ಯಾವ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ಒಂದು ವಾರದ ಹಿಂದೆಯೆಷ್ಟೇ ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಆದರೆ ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆ ಬಿಡುವು ನೀಡಿದ್ದು, ಬಿಸಿಲಿನ ವಾತಾವರಣ ಮುಂದುವರೆದಿದೆ. ನಗರದಲ್ಲಿ ಮತ್ತೆ ಇಂದು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು (ಮೇ 20) ಗುಡುಗು, ಮಿಂಚು ಸಹಿತ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೆ ನಗರದಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ಬಳಿಕ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಹಾಗೆಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ದಿನಗಳ ಕಾಲ ಮಳೆ ಸುರಿಯಲಿದೆ. ಅಲ್ಲದೆ ದಕ್ಷಿಣ ಒಳನಾಡಿನಲ್ಲಿ ಮೇ 20 ಮತ್ತು 21ರಂದು ಮಳೆ ಸುರಿಯುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಮುಚ್ಚಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಮಳೆ ಆಗಲಿದೆ ಎನ್ನುವ ಮಾಹಿಯನ್ನು ನೀಡಿದೆ.
ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶದ ವಿವರ
ಇನ್ನು ಇಂದು ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ. ಮೇ 22ರ ಬಳಿಕ ಮಳೆಯ ತೀವ್ರತೆ ಹೆಚ್ಚಲಿದ್ದು, ಮೇ 23ರ ವೇಳೆಗೆ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಹಾಗೆಯೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಿಬಳ್ಳಾಪುರ, ಕೋಲಾರ, ಚಾಮರಾಜನಗರ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮೊದಲ ಮೂರು ದಿನಗಳ ಕಾಲ ಸಾಧಾರಣ ಮಳೆ ಆಗಲಿದೆ ಎಂದು ತಿಳಿಸಿದೆ.
ಇನ್ನು ಮುಂದಿನ ಐದು ದಿನಗಳ ಪೈಕಿ ಕೊನೆಯ ಎರಡು ದಿನಗಳ ಕಾಲ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯೆತೆಯಿದೆ. ಈ ವೇಳೆ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಳೆ ಸುರಿಸುವ ಮಾರುತಗಳು ಸಕ್ರಿಯ ಆಗಿರಲಿವೆ ಎನ್ನುವ ಸೂಚನೆಯನ್ನೂ ನೀಡಿದೆ.
ಒಟ್ಟಿನಲ್ಲಿ ರಾಜ್ಯದ ಹಲವೆಡೆ ಈಗಾಗಲೇ ಮಳೆರಾಯನ ಆರ್ಭಟದಿಂದ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಅಲ್ಲದೆ ಕಳೆದ ಎರಡು ದಿನಗಳಿಂದ ಬಿಸಿಲಿನ ವಾತವರಣ ಮುಂದುವರೆದಿದ್ದು, ಇದರಿಂದ ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣ ಆಗಿತ್ತು. ಮತ್ತೆ ಇದೀಗ ಇಂದಿನಿಂದ ಮಳೆರಾಯನ ಆರ್ಭಟ ಮುಂದುವರೆಯಲಿದೆ ಅನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.












Click it and Unblock the Notifications