Karnataka Rain: ಅರಬ್ಬಿ ಸಮುದ್ರ ಪ್ರಕ್ಷುಬ್ಧ: ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್
Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬೆಂಗಳೂರಿನಲ್ಲಿ ಗುರುವಾರ ಸಂಜೆ ಭಾರಿ ಮಳೆಯಾಗಿದ್ದು, ಮಳೆಯಿಂದ ಹಲವು ಅನಾಹುತಗಳು ಸಂಭವಿಸಿವೆ. ಇನ್ನು ಚಂಡಮಾರುತದ ಪ್ರಸರಣ ಪ್ರಭಾವ ಹಾಗೂ ಕೇರಳದಲ್ಲಿ ಮಾನ್ಸೂನ್ ಪ್ರವೇಶ ಕಾರಣಕ್ಕೆ ಭಾರೀ ಮಳೆ ಮುಂದುವರಿದಿದೆ. ಮುಂದಿನ 3ರಿಂದ 4 ದಿನಗಳಲ್ಲಿ ಆಗ್ನೇಯ ಅರೇಬಿಯನ್ ಸಮುದ್ರ, ಕೊಮೆರಿನ್ ಪ್ರದೇಶ, ನೈಋತ್ಯ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಅಂಡಮಾನ್ ಸಮುದ್ರದ ಉಳಿದ ಭಾಗಗಳು ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಇನ್ನು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆ ಆಗಲಿದೆ. ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಗದದ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗಾಳಿಯ ವೇಗವು ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ.

ಧಾರವಾಡ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಸಾಧರಣ ಮಳೆ ಇರಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಇನ್ನು ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಯಲ್ಲಿ ಮಳೆಯಾಗಲಿದೆ.
ಇದರ ಹೊರತಾಗಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಯಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದ್ದು, ಮಿಂಚು - ಗುಡುಗು ಸಹಿತ ಭಾರೀ ಮಳೆ ಆಗಲಿದೆ. ಚಿಕ್ಕಮಗಳೂರು, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿಯೂ ಬಿರುಗಾಳಿಯೊಂದಿಗೆ ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಒಟ್ಟಾರೆ ರಾಜ್ಯದಲ್ಲಿ ಇನ್ನೂ ಒಂದು ವಾರದ ಅವಧಿಗೆ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಬೀದರ್‌ನಲ್ಲಿ ಗರಿಷ್ಠ ತಾಪಮಾನವು 41.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ (1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್) ಇರಲಿದೆ.
ಒಳನಾಡಿನ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ಗಮನಾರ್ಹವಾಗಿ ಕಡಿಮೆಯಾಗಿದೆ. ಉಳಿದ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ. ಇನ್ನು ಮುಂದಿನ ಐದು ದಿನಗಳ ಅವಧಿಗೆ ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ: 3 ದಿನ ಯೆಲ್ಲೋ ಅಲರ್ಟ್
ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ - ಸಂಜೆ ವೇಳೆಗೆ ಮೋಡ ಕವಿದ ವಾತಾವರಣವಾಗಿ ಬದಲಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಹಾಗೂ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ, ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.












Click it and Unblock the Notifications