Karnataka Rain Alert: ವಾಯುಭಾರ ಕುಸಿತ, ಅರ್ನಬ್ ಸೈಕ್ಲೋನ್ ಪ್ರಭಾವ: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಐಎಂಡಿ ಮುನ್ಸೂಚನೆ

Karnataka Rain Alert: ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಆಗುತ್ತಿದೆ. ಸೆಪ್ಟೆಂಬರ್ 28ರ ವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದ ಪ್ರಭಾವದಿಂದಾಗಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸೈಕ್ಲೋನ್ / ಚಂಡಮಾರುತವಾಗಿ ಬದಲಾಗಿದೆ. ಇದಕ್ಕೆ ಅನರ್ಬ್ ಸೈಕ್ಲೋನ್ ಎಂದು ಹೆಸರಿಡಲಾಗಿದೆ.

ನೈಋತ್ಯ ಮಾನ್ಸೂನ್ ಪಂಜಾಬ್, ಹರಿಯಾಣ, ರಾಜಸ್ಥಾನ, ಇಡೀ ದೆಹಲಿ, ಉತ್ತರ ಪ್ರದೇಶ ಮತ್ತು ಗುಜರಾತ್‌ನ ಕೆಲವು ಭಾಗಗಳಿಂದ ಮತ್ತಷ್ಟು ಹಿಂತೆಗೆದುಕೊಂಡಿದೆ. ಪಶ್ಚಿಮ ಕೇಂದ್ರ ಮತ್ತು ಪಕ್ಕದ ವಾಯುವ್ಯ ಬಂಗಾಳ ಕೊಲ್ಲಿಯ ಮೇಲಿನ ಆಳವಾದ ಖಿನ್ನತೆಯು ಕಳೆದ 6 ಗಂಟೆಗಳಲ್ಲಿ 5 ಕಿಮೀ ವೇಗದಲ್ಲಿ ಪಶ್ಚಿಮಕ್ಕೆ ಚಲಿಸಿತು ಕಳಿಂಗಪಟ್ಟಣಂ (ಆಂಧ್ರ ಪ್ರದೇಶ), ವಿಶಾಖಪಟ್ಟಣಂನ ಪೂರ್ವ-ಈಶಾನ್ಯಕ್ಕೆ 140 ಕಿಮೀ (ಆಂಧ್ರ ಪ್ರದೇಶ), ಗೋಪಾಲಪುರದಿಂದ 150 ಕಿಮೀ ದಕ್ಷಿಣ (ಒಡಿಶಾ) ಮತ್ತು 240 ಕಿಮೀ ದಕ್ಷಿಣ ನೈಋತ್ಯ ಪುರಿ (ಒಡಿಶಾ). ಇದು ತೀವ್ರ ವಾಯುಭಾರ ಕುಸಿತವಾಗಿ ಕಳಿಂಗಪಟ್ಟಣಕ್ಕೆ ಸಮೀಪವಿರುವ ವಿಶಾಖಪಟ್ಟಣಂ ಮತ್ತು ಗೋಪಾಲ್‌ಪುರದ ನಡುವೆ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸುವ ಮತ್ತು ಉತ್ತರ ಆಂಧ್ರಪ್ರದೇಶ - ದಕ್ಷಿಣ ಒಡಿಶಾ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ.

Karnataka Rain Alert Bay of Bengal Depression Arnab Cyclone Impact Heavy Rain These Districts Says IMD

ಒಂದು ಟ್ರಫ್ ಪಶ್ಚಿಮ ಕೇಂದ್ರ ಮತ್ತು ಪಕ್ಕದ ವಾಯುವ್ಯ ಬಂಗಾಳ ಕೊಲ್ಲಿಯ ಮೇಲೆ ಆಳವಾದ ಖಿನ್ನತೆಯ ಕೇಂದ್ರದಿಂದ ಮಧ್ಯ ಬಂಗಾಳ ಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರದ ಮೂಲಕ ಥೈಲ್ಯಾಂಡ್ ಕೊಲ್ಲಿಯವರೆಗೆ ಸಾಗುತ್ತದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 7.6 ಕಿಮೀ ವರೆಗೆ ವಿಸ್ತರಿಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇದರ ಪ್ರಭಾವದಿಂದ ದೇಶದ ವಿವಿಧ ಪ್ರದೇಶಗಳಲ್ಲಿ ಮಳೆ ಆಗುತ್ತಿದ್ದು, ಕರ್ನಾಟಕದಲ್ಲೂ ಮಳೆ ಆರ್ಭಟ ಮುಂದುವರಿದಿದೆ.

Karnataka Rain Alert: ಉತ್ತರ ಕನ್ನಡ - ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ

ಇನ್ನು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಹಾಗೂ ಕರಾವಳಿ ಪ್ರದೇಶಗಳಲ್ಲಿ ಸೆಪ್ಟೆಂಬರ್ 24ರಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಭಾರೀ ಮಳೆ ಇರಲಿದ್ದು, ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಈ ಭಾಗದಲ್ಲಿ ಗಾಳಿ ಬೀಸಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.

Karnataka Rain Alert: ಈ ಭಾಗಗಳಲ್ಲಿ ಮಳೆ

ಬೆಂಗಳೂರು ನಗರ ಹಾಗೂ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಮಳೆ ಇರಲಿದೆ. ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಹಾಗೂ ಬಿರುಗಾಳಿ (ಗಂಟೆಗೆ 30-40 ಕಿ.ಮೀ. ವೇಗ) ಬೀಸುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಹಾವೇರಿ, ಧಾರವಾಡ, ಕೊಪ್ಪಳ, ವಿಜಯಪುರ ಮತ್ತು ಗದಗ ಜಿಲ್ಲೆಗಳ ಕೆಲವೆಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಹಾಗೂ ಬಿರುಗಾಳಿ (ಗಂಟೆಗೆ 30-40 ಕಿ.ಮೀ. ವೇಗ) ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಅಲ್ಲದೆ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮತ್ತು ಬಿರುಗಾಳಿ (30-40 ಕಿ.ಮೀ.) ಬೀಳುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆ ಹಾಗೂ ಬಿರುಸಿನ ಗಾಳಿ (30-40 ಕಿಮೀ) ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+