Karnataka Rain Alert: ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಮಿಂಚು–ಗುಡುಗು ಸಹಿತ ಭಾರೀ ಮಳೆ; ಐಎಂಡಿ ಮುನ್ಸೂಚನೆ ಏನಿದೆ
Karnataka Rain Alert: ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದ 10 ಜಿಲ್ಲೆಗಳಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿದಿದೆ. ಮುಂದಿನ ಮೂರು ದಿನಗಳ ವರೆಗೆ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಅಲ್ಲದೆ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಅಕ್ಟೋಬರ್ 11ರ ವರೆಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 6ರಂದು ಮಳೆ, ಹವಾಮಾನ ವರದಿಯ ಸಂಪೂರ್ಣ ವಿವರ ಇಲ್ಲಿದೆ.
ನೈಋತ್ಯ ಮಾನ್ಸೂನ್ ಹಿಂತೆಗೆದುಕೊಳ್ಳುವ ರೇಖೆಯು 27.5°N/86.5°E, ಸುಪೌಲ್, ರಾಂಚಿ, ರಾಯ್‌ಪುರ, ಬ್ರಹ್ಮಪುರಿ, ಪರ್ಭಾನಿ, ಬಾರಾಮತಿ, ಹರ್ನ್ಸ್ ಮತ್ತು 17.5°N/71.8°E ಮೂಲಕ ಹಾದುಹೋಗುತ್ತಿದೆ. ಮುಂದಿನ 2-3 ದಿನಗಳಲ್ಲಿ ಮರಾಠವಾಡ ಮತ್ತು ವಿದರ್ಭದ ಹೆಚ್ಚಿನ ಭಾಗಗಳು, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳು ಮತ್ತು ತೆಲಂಗಾಣ ಮತ್ತು ಉತ್ತರ ಒಳನಾಡಿನ ಕರ್ನಾಟಕದ ಕೆಲವು ಭಾಗಗಳಿಂದ ನೈಋತ್ಯ ಮಾನ್ಸೂನ್ ಮತ್ತಷ್ಟು ಹಿಂತೆಗೆದುಕೊಳ್ಳಲು ಪರಿಸ್ಥಿತಿಗಳು ಅನುಕೂಲಕರವಾಗುವ ಸಾಧ್ಯತೆಯಿದೆ. ಗಂಗಾನದಿಯ ಪಶ್ಚಿಮ ಬಂಗಾಳದಿಂದ ಮರಾಠವಾಡಕ್ಕೆ ಇರುವ ತೊಟ್ಟಿ, ಈಗ ಗಂಗಾನದಿಯ ಪಶ್ಚಿಮ ಬಂಗಾಳದಿಂದ ಮಧ್ಯ ಮಹಾರಾಷ್ಟ್ರಕ್ಕೆ ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ವಿದರ್ಭ ಮತ್ತು ಮರಾಠವಾಡದ ಮೂಲಕ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದಲ್ಲಿ ಸಾಗುತ್ತದೆ ಮತ್ತು ಎತ್ತರದೊಂದಿಗೆ ನೈಋತ್ಯಕ್ಕೆ ವಾಲುತ್ತದೆ.

ಕರ್ನಾಟಕದ ಉತ್ತರ ಒಳನಾಡಿನ ಮತ್ತು ನೆರೆಹೊರೆಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಇದೆ.
ಕೊಮೊರಿಯನ್ ಪ್ರದೇಶದಿಂದ ತಮಿಳುನಾಡು ಮತ್ತು ದಕ್ಷಿಣ ಒಳನಾಡಿನಾದ್ಯಂತ ಉತ್ತರ ಒಳನಾಡಿನ ಕರ್ನಾಟಕದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆಯವರೆಗೆ ಕಡಿಮೆ ಒತ್ತಡದ ಹಾದಿ ವಿಸ್ತರಿಸಿದೆ ಎಂದೂ ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. ಹೀಗಾಗಿ, ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.
Karnataka Rain Alert: ಈ 10 ಜಿಲ್ಲೆಗಳಲ್ಲಿ ಭಾರೀ ಮಳೆ: ಐಎಂಡಿ
ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಶಿವಮೊಗ್ಗ, ಹಾಸನ, ಮಂಡ್ಯ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದೂ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅಲ್ಲದೆ ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರದಲ್ಲೂ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚುದುರಿದಂತೆ ಮಳೆ ಆಗುವ ಸಾಧ್ಯತೆ ಇದೆ.
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ ?
ಬೆಂಗಳೂರಿನಲ್ಲಿ ಬಹುತೇಕ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಕೆಲವೆಡೆ ಮಿಂಚು - ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 31 ಡಿಗ್ರಿ ಸೆಲ್ಸಿಯಸ್ ಹಾಗೂ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.


Click it and Unblock the Notifications
