Karnataka Rain: ಚಂಡಮಾರುತದ ಚಲನೆ, ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ
ಶ್ರೀಲಂಕಾ ದಕ್ಷಿಣ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಗೊಂಡು, ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿವೆ. ಹೀಗಾಗಿ ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯುವ ಸಾಧ್ಯತೆಯಿದ್ದು, ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದ ಪರಿಣಾಮದಿಂದ ನವೆಂಬರ್ 30ರಂದು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ದಿನ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯುವ ಸಾಧ್ಯತೆಯಿದ್ದು, ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ.

ಶ್ರೀಲಂಕಾದ ಕರಾವಳಿ ಮತ್ತು ಬಂಗಾಳಕೊಲ್ಲಿಯ ಪಕ್ಕದ ನೈರುತ್ಯ ಭಾಗದಲ್ಲಿರುವ ದಿತ್ವಾ ಚಂಡಮಾರುತವು ಗಂಟೆಗೆ 10 ಕಿ.ಮೀ ವೇಗದಲ್ಲಿ ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸಿದೆ. ಇದು ಶ್ರೀಲಂಕಾದಿಂದ 100 ಕಿ.ಮೀ. ವಾಯುವ್ಯಕ್ಕೆ, ಕಾರೈಕಲ್‌ನಿಂದ 320 ಕಿ.ಮೀ. ಆಗ್ನೇಯಕ್ಕೆ, ಪುದುಚೇರಿಯಿಂದ 430 ಕಿ.ಮೀ. ಆಗ್ನೇಯಕ್ಕೆ ಮತ್ತು ಚೆನ್ನೈನಿಂದ 530 ಕಿ.ಮೀ. ದಕ್ಷಿಣಕ್ಕೆ ಇದೆ.
ಇದು ಶ್ರೀಲಂಕಾ ಕರಾವಳಿ ಮತ್ತು ಬಂಗಾಳಕೊಲ್ಲಿಯ ಪಕ್ಕದ ನೈಋತ್ಯಕ್ಕೆ ಉತ್ತರ-ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದ್ದು, ನವೆಂಬರ್ 30ರಂದು ಬೆಳಿಗ್ಗೆ ಉತ್ತರ-ವಾಯುವ್ಯಕ್ಕೆ ಬಂಗಾಳಕೊಲ್ಲಿಯ ಬಳಿ, ಪುದುಚೇರಿ ಮತ್ತು ಪಕ್ಕದ ದಕ್ಷಿಣ ಆಂಧ್ರಪ್ರದೇಶದ ಬಳಿಯ ನೈಋತ್ಯ ಬಂಗಾಳಕೊಲ್ಲಿಯ ಮೇಲೆ ತಲುಪುವ ಸಾಧ್ಯತೆಯಿದೆ ಎಂದು ವಿವರಿಸಿದೆ.
ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳು. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ.ಚಿಕ್ಕಮಗಳೂರು, ದಾವಣಗೆರೆ ಹಾಗೂ ಹಲವೆಡೆ ಒಣ ಹವೆ ಇರುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದೆ. ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹೇಳಿದೆ.
ಬೆಂಗಳೂರು ಭಾಗದಲ್ಲಿ ಸಂಜೆ ಹಾಗೂ ರಾತ್ರಿ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಬೆಳಗಿನ ಜಾವ ಕೆಲವು ಪ್ರದೇಶಗಳಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25 ಡಿಗ್ರಿ ಸೆಲ್ಸಿಯಸ್ ಮತ್ತು 16 ಡಿಗ್ರಿ ಸೆಲ್ಸಿಯಸ್ ಇರಲಿದೆ.












Click it and Unblock the Notifications