Karnataka Rain: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಭಾರೀ ಮಳೆ, ನೈಋತ್ಯ ಮಾನ್ಸೂನ್ ಪ್ರವೇಶ ಅಪ್ಡೇಟ್ಸ್‌

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಚಂಡಮಾರುತ ಪ್ರಸರಣ ಪ್ರಭಾವದಿಂದ ಮಳೆ ಆಗುತ್ತಿದ್ದು ಮುಂದಿನ 3 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಇನ್ನು ಮೇ 25 ರಂದು ಕೇರಳಕ್ಕೆ ನೈಋುತ್ಯ ಮಾನ್ಸೂನ್ ಪ್ರವೇಶವಾಗಲಿದೆ. ಕರ್ನಾಟಕಕ್ಕೆ ಜೂನ್ ಮೊದಲ ವಾರದಲ್ಲಿ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆ ಇದೆ.

ಸಾಮಾನ್ಯವಾಗಿ ಕೇರಳಕ್ಕೆ ನೈಋತ್ಯ ಮಾನ್ಸೂನ್‌ ಪ್ರವೇಶ ಮಾಡಿದ ನಂತರ ಒಂದು ವಾರ ಅಥವಾ 15 ದಿನಗಳ ಅವಧಿಯಲ್ಲಿ ನೈಋತ್ಯ ಮಾನ್ಸೂನ್ ಕರ್ನಾಟಕಕ್ಕೆ ಪ್ರವೇಶಿಸುತ್ತದೆ. ಹೀಗಾಗಿ, ಕರ್ನಾಟಕದಲ್ಲೂ ಈ ಬಾರಿ ಉತ್ತಮ ಮಳೆ ಆಗುವ ನಿರೀಕ್ಷೆ ಇದೆ. ಇನ್ನು ಮುಂದಿನ ಮೂರರಿಂದ ನಾಲ್ಕು ದಿನಗಳ ವರೆಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Karnataka Rain

Karnataka Rain: ಚಂಡಮಾರುತದ ಪ್ರಸರಣ ಕರ್ನಾಟಕದಲ್ಲಿ ಮಳೆ

ನೈಋತ್ಯ ಮಾನ್ಸೂನ್ ಪ್ರಭಾವವು ಆಗ್ನೇಯ ಅರೇಬಿಯರ್ ಸಮುದ್ರದ ಕೆಲವು ಭಾಗಗಳು ಕೊಮೊರಿನ್ ಪ್ರದೇಶದ ಕೆಲವು ಭಾಗಗಳು, ನೈಋತ್ಯ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯಯ ಕೆಲವು ಭಾಗಗಳು ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಪೂರ್ವ-ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ಮುಂದುವರೆದಿದೆ.

ಮುಂದಿನ 3-4 ದಿನಗಳಲ್ಲಿ ಆಗ್ನೇಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಕೊಮೊರಿನ್ ಪ್ರದೇಶ, ನೈಋತ್ಯ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಅಂಡಮಾನ್ ಸಮುದ್ರದ ಉಳಿದ ಭಾಗಗಳು ಮತ್ತು ಪೂರ್ವ-ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ನೈಋುತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ.

ಮೇ 25 ರಂದು ಕೇರಳದಲ್ಲಿ ನೈಋುತ್ಯ ಮಾನ್ಸೂನ್ ಪ್ರಾರಂಭವಾಗುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ ಈಗ ಪಶ್ಚಿಮ ಮಧ್ಯಪ್ರದೇಶದಿಂದ ಮಧ್ಯ ಮಹಾರಾಷ್ಟ್ರ , ಮಾರಾಠವಾಡ ಮತ್ತು ಉತ್ತರ ಕರ್ನಾಟಕದ ಮೂಲಕ ದಕ್ಷಿಣ ಒಳನಾಡಿನ ಕರ್ನಾಟಕದ ವರೆಗೆ ಸಾಗುತ್ತದೆ. ಸರಾಸರಿ ಸಮುದ್ರ ಮಟ್ಟಕ್ಕಿಂತ 1.5 ಕಿ.ಮೀ ವರೆಗೆ ವಿಸ್ತರಿಸುತ್ತದೆ. ದಕ್ಷಿಣ ಕರಾವಳಿಯ ಆಂಧ್ರಪ್ರದೇಶ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟಕ್ಕಿಂದ 3.1 ಮತ್ತು 5.8 ಕಿ.ಮೀ. ನಡುವೆ ಮೇಲ್ಭಾಗದ ವಾಯು ಚಂಡ ಮಾರುತದ ಪ್ರಸರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕರ್ನಾಟಕದ ಈ ಭಾಗಗಳಲ್ಲಿ ಮಳೆ

ಚಂಡಮಾರುತದ ಪ್ರಸರಣದ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಲ್ಲಿ ಮೇ 24ರ ವರೆಗೂ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆ ಆರ್ಭಟ ಜೋರಾಗಿ ಇರಲಿದೆ. ಈ ಭಾಗಗಳಲ್ಲಿ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ ಆಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯೊಂದಿಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು - ಶಿವಮೊಗ್ಗ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಆಗಲಿದೆ.

ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಮಗಳೂರು ಮತ್ತು ತುಮಕೂರು ಜಿಲ್ಲೆಗಳ ಮಿಂಚು - ಗುಡುಗು ಸಹಿತ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲೂ ಭಾರೀ ಮಳೆ ಆಗಲಿದೆ ಎಂದು ಐಎಂಡಿ ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+