Karnataka Rain: ಏಪ್ರಿಲ್ 20ರವರೆಗೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ಯುಗಾದಿ ಹಬ್ಬದ ದಿನದಿಂದ ಶುರುವಾದ ಮಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಮುಂದುವರೆದಿದೆ. ಭಾನುವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.

ಬಿರು ಬೇಸಿಗೆಯಿಂದ ಕಂಗಾಲಾಗಿದ್ದ ರಾಜ್ಯದ ಹಲವು ಜಿಲ್ಲೆಗಳ ಜನ ಮಳೆಯಿಂದ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿರುವ ಕಾರಣ ತಾಪಮಾನದಲ್ಲಿ ಕೂಡ ಇಳಿಕೆಯಾಗಿದೆ.

Karnataka Rain Alert Heavy Rain Expected in These Districts Until April 20th

ಏಪ್ರಿಲ್ 14ರ ಬೆಳಿಗ್ಗೆ 8.30ಕ್ಕೆ ಕೊನೆಯಾದಂತೆ 24 ಗಂಟೆಗಳ ಅವಧಿಯಲ್ಲಿ ಆಗುಂಬೆಯಲ್ಲಿ 81 ಮಿ.ಮೀ ಮಳೆಯಾಗಿದೆ. ತಾವರಗೇರ 66 ಮಿ.ಮೀ, ಜಯಪುರ 44 ಮಿ.ಮೀ, ಧರ್ಮಸ್ಥಳ 35.8 ಮಿ.ಮೀ, ಧಾರವಾಡ 33 ಮಿ.ಮೀ, ಶಿವಮೊಗ್ಗ 32.2 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

ಭಾನುವಾರ ಶೃಂಗೇರಿಯಲ್ಲಿ ಕೂಡ ಮಳೆಯಾಗಿದ್ದು, ಆಗುಂಬೆಯಲ್ಲಿ ಲಘು ಮಳೆ ಮುಂದುವರೆದಿದೆ. ಕುದುರೆಮುಖ, ಕಾರ್ಕಳ, ಹೊರನಾಡು, ಮೂಡಬಿದಿರೆ, ಕಳಸ ಭಾಗದಲ್ಲಿ ಕೂಡ ಮಳೆಯಾಗಿದೆ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಹಲವು ಕಡೆಗಳಲ್ಲಿ ಭಾನುವಾರ ರಾತ್ರಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

ಏಪ್ರಿಲ್ 20 ರವರೆಗೆ ಎಲ್ಲೆಲ್ಲಿ ಮಳೆ

ಏಪ್ರಿಲ್ 15ರಂದು ಸೋಮವಾರ ರಾಜ್ಯದಲ್ಲಿ ಮಳೆ ಬಿಡುವು ನೀಡುವ ಸಾಧ್ಯತೆ. ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಏಪ್ರಿಲ್ 16ರಂದು ಮಂಗಳವಾರ, ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದರುದಂತೆ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 17ರಂದು ಬುಧವಾರ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 18ರಂದು ಗುರುವಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

ಏಪ್ರಿಲ್ 19ರಂದು ಶುಕ್ರವಾರ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಏಪ್ರಿಲ್ 20, ಶನಿವಾರದಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ವಿಜಯನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+