Karnataka Rains: ಇಂದು 7 ಜಿಲ್ಲೆಗಳಿಗೆ 'ರೆಡ್ ಅಲರ್ಟ್', ಮುಂದಿನ 3 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು, ಮೇ 21: ಕರ್ನಾಟಕದ ಪ್ರತಿ ಜಿಲ್ಲೆಗಳಲ್ಲೂ ಆರ್ಭಟಿಸುತ್ತಿರುವ ಪೂರ್ವ ಮುಂಗಾರು ಮಳೆ ಅಬ್ಬರ ಇನ್ನು ಕೆಲವು ದಿನಗಳ ಕಾಲ ಮುಂದುವರಿಯಲಿದೆ. ಇಂದಿನಿಂದ ಮುಂದಿನ 2 ದಿನ ಅತ್ಯಧಿಕ ಭಾರೀ ಮಳೆ ಆಗಲಿದೆ. ನಂತರದ 03 ದಿನ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗಲಿದೆ. ಒಟ್ಟಾರೆ ಮುಂದಿನ 05 ವಿಪರೀತ ಮಳೆ ಆಗಲಿದೆ. 7 ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ರಾಜ್ಯದ ಒಳನಾಡು, ಕರಾವಳಿ ಹಾಗೂ ಮಧ್ಯ ಕರ್ನಾಟಕ ಜಿಲ್ಲೆಗಳಲ್ಲಿ ಒಂದು ವಾರದಿಂದ ಮಳೆಯಾಗುತ್ತಿದೆ. ಬೆಂಗಳೂರಿನಂತಹ ನಗರದಲ್ಲಿ ಮಳೆ ಮುಂದುವರಿದಿದ್ದು ಪ್ರವಾಹ ಸ್ಥಿತಿ ಉಂಟಾಗಿದೆ. ಬದಲಾದ ಹವಾಮಾನ ವೈಪರೀತ್ಯಗಳ ಕಾರಣದಿಂದ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗಲಿದೆ.

Karnataka Rain Alert Heavy Rain Next 3 Days for These Districts Red and Orange Alert

ರಾಜ್ಯ ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ (ಮೇ 21, 22) ಸುಮಾರು 200 ಮಿಲಿ ಮೀಟರ್‌ಗೂ ಅಧಿಕ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಈ ಮೂರು ಜಿಲ್ಲೆ ಒಳಗೊಂಡಂತೆ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ಆರ್ಭಟಿಸಲಿದ್ದು, ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಲಾಗಿದೆ.

ರೆಡ್ ಅಲರ್ಟ್ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಹಾನಿ ಆಗುವ ಸಾಧ್ಯತೆ ಇದೆ. ಗಾಳಿಯ ವೇಗವು ಹೆಚ್ಚಿನ ಪ್ರಮಾಣದಲ್ಲಿರಲಿದೆ. ಇಡೀ ದಿನ ಮಳೆ ಸುರಿಯುವ ಲಕ್ಷಣಗಳು ಇವೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

'ಆರೆಂಜ್ ಅಲರ್ಟ್' ಜಿಲ್ಲೆಗಳು ಇವು

ಇನ್ನೂ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಹ ಜೋರು ಮಳೆ ಆರ್ಭಟಿಸಲಿದೆ. ಬಿರುಗಾಳಿ ಸಹಿತ ಕನಿಷ್ಠ 110 ಮಿಲಿ ಮೀಟರ್ ಮಳೆ ಆಗಲಿದ್ದು, ಈ ಜಿಲ್ಲೆಗಳಿಗೆ ಮುಂದಿನ ಎರಡು ದಿನ 'ಆರೆಂಜ್ ಅಲರ್ಟ್' ನೀಡಲಾಗಿದೆ.

Karnataka Rain Alert Heavy Rain Next 3 Days for These Districts Red and Orange Alert

ಮೇ 23ರಿಂದ ರಾಜ್ಯದ ಅನೇಕ ಕಡೆಗಳಲ್ಲಿ ಮಳೆ ಇಳಿಕೆ ಆಗುವ ಲಕ್ಷಣಗಳು ಇದೆ ಎಂದು ಹವಾಮಾನ ಇಲಾಖೆ ಹೇಳುತ್ತಿದೆ. ಆದರೆ ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಮೇಲ್ಮೈನಲ್ಲಿ ಉಂಟಾಗಿರುವ ಚಂಡಮಾರುತ ಪ್ರಸರಣವು ಮತ್ತಷ್ಟು ತೀವ್ರಗೊಂಡರೆ, ರಾಜ್ಯದಲ್ಲಿ ಇನ್ನು ಕೆಲವು ದಿನಗಳ ಕಾಲ ಭಾರೀ ಮಳೆ ಆಗುವ ಸಾಧ್ಯತೆ ಇದೆ.

ಕರಾವಳಿ, ಮಲೆನಾಡು ಮಾತ್ರವಲ್ಲದೇ ಒಣಹವೆಯ ಪ್ರದೇಶಗಳಾದ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲೂ ಬೇಸಿಗೆಯಲ್ಲಿ ಮಳೆಗಾಲದ ವಾತಾವರಣ ನಿರ್ಮಾಣವಾಗಿದೆ. ತಾಪಮಾನದಲ್ಲಿ ಇಳಿಕೆ ಆಗಿದೆ. ಎಲ್ಲೆಡೆ ತಂಪು ವಾತಾವರಣ ಸೃಷ್ಟಿಯಾಗಿದೆ. ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು ಭಾಗದಲ್ಲೂ ತಾಪಮಾನ ಇಲಾಖೆ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+