Karnataka Rain Alert: ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದ್ದು, ಉಳಿದಂತೆ ರಾಜ್ಯಾದ್ಯಂತ ಒಣ ಹವೆ ಮುಂದುವರಿದಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದ ಮೇಲಿರುವ ಸುಳಿಗಾಳಿಯ ಪ್ರಭಾವದಿಂದ ಹವಾಮಾನದಲ್ಲಿ ಕೆಲವು ಬದಲಾವಣೆಗಳು ಕಂಡುಬರುತ್ತಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬುಧವಾರವೂ (ಫೆ.24) ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಹೂವಿನಹಡಗಲಿಯಲ್ಲಿ (ಬಾಗಲಕೋಟೆ) 3 ಸೆಂ.ಮೀ ಅತಿ ಹೆಚ್ಚು ಮಳೆಯಾಗಿದೆ. ಗಾಣಗಾಪುರ (ಕಲಬುರಗಿ), ಸೈದಾಪುರ (ಯಾದಗಿರಿ) ತಲಾ 2 ಸೆಂ.ಮೀ. ಗದಗ, ಸೇಡಂ, ರಾಯಚೂರು, ವಿಜಯಪುರ ಮತ್ತು ಬೆಳಗಾವಿಯ ಕೆಲವು ಭಾಗಗಳಲ್ಲಿ 1 ಸೆಂ.ಮೀ ಮಳೆಯಾಗಿದೆ. ರಾಜ್ಯದ ಹವಾಮಾನದಲ್ಲಿ ಏರುಪೇರು ಕಂಡುಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಒಣ ಹವೆ ಮುಂದುವರಿದಿದ್ದರೂ, ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ.

ಮಳೆಗೆ ಕಾರಣ ಏನು?
ಅರಬ್ಬಿ ಸಮುದ್ರದ ಸೌರಾಷ್ಟ್ರ ಮತ್ತು ಕಚ್ ಪ್ರದೇಶದಲ್ಲಿ ಹಾಗೂ ಕೇರಳ ಕರಾವಳಿಯ ಸಮೀಪ ಸುಳಿಗಾಳಿ ವ್ಯವಸ್ಥೆ ಇದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ಮುಂದುವರಿದಿದ್ದು, ಇದು ಮುಂದಿನ 24 ಗಂಟೆಗಳಲ್ಲಿ ದುರ್ಬಲಗೊಳ್ಳಲಿದೆ. ಅಲ್ಲದೆ, ದಕ್ಷಿಣ ಒಳನಾಡಿನಿಂದ ಮರಾಠವಾಡದವರೆಗೆ ಹರಡಿರುವ ಗಾಳಿಯ ಒತ್ತಡದ ಸುಳಿ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಗೆ ಕಾರಣವಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಎಲ್ಲೆಲ್ಲಿ ಮಳೆ?
ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಹವಾಮಾನ ಮುಂದುವರಿಯಲಿದೆ.
ಕನಿಷ್ಠ ತಾಪಮಾನ ದಾಖಲು
ದಾವಣಗೆರೆ ಮತ್ತು ಬೀದರ್‌ನಲ್ಲಿ ಕನಿಷ್ಠ 17.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಹಾಸನದಲ್ಲಿ ಕನಿಷ್ಠ ತಾಪಮಾನವು ವಾಡಿಕೆಗಿಂತ ಕಡಿಮೆಯಿದ್ದು, 13 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನವು ವಾಡಿಕೆಗಿಂತ ಹೆಚ್ಚಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 19.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಾರವಾರ ಮತ್ತು ಮಂಗಳೂರು ಭಾಗದಲ್ಲಿ ಕನಿಷ್ಠ ತಾಪಮಾನವು 23-24 ಡಿಗ್ರಿ ಸೆಲ್ಸಿಯಸ್, ವಾಡಿಕೆಗಿಂತ ತುಸು ಹೆಚ್ಚಿದೆ.
ಬೆಂಗಳೂರು ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಆಕಾಶವು ಮುಖ್ಯವಾಗಿ ಸ್ವಚ್ಛವಾಗಿರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಗರಿಷ್ಠ ತಾಪಮಾನ 32°C ಹಾಗು ಕನಿಷ್ಠ ತಾಪಮಾನ: 19°C ಇರಲಿದೆ. ಮುಂಜಾನೆಯ ಅವಧಿಯಲ್ಲಿ ಕೆಲವು ಪ್ರದೇಶಗಳಲ್ಲಿ ಮಂಜು ಮುಸುಕುವ ಸಾಧ್ಯತೆಯಿದೆ.
ಮುಂದಿನ ಐದು ದಿನಗಳವರೆಗೆ ರಾಜ್ಯದ ಕನಿಷ್ಠ ತಾಪಮಾನದಲ್ಲಿ ಯಾವುದೇ ಭಾರಿ ಬದಲಾವಣೆಗಳಿಲ್ಲದಿದ್ದರೂ, ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಮತ್ತು ರೈತರು ಹವಾಮಾನ ಬದಲಾವಣೆಯತ್ತ ಗಮನಹರಿಸುವುದು ಅಗತ್ಯ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications