Karnataka Rain: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಭಾರೀ ಮಳೆ: 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ ಐಎಂಡಿ

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 21ರ ಮಂಗಳವಾರ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಮುಂದುವರಿಯಲಿದೆ.

ಸರಾಸರಿ ಸಮುದ್ರ ಮಟ್ಟದಲ್ಲಿ ಮಾನ್ಸೂನ್ ಟ್ರಫ್ ಈಗ ಶ್ರೀ ಗಂಗಾನಗರ, ರೋಹಕ್, ಹಾರ್ಡೋಯ್, ವಾರಣಾಸಿ, ಡಾಲ್ಟನ್‌ಗಂಜ್, ಪುರುಲಿಯಾ, ದಿಘಾ ಮೂಲಕ ಹಾದುಹೋಗುತ್ತದೆ ಮತ್ತು ಅಲ್ಲಿಂದ ಆಗ್ನೇಯಕ್ಕೆ ಈಶಾನ್ಯ ಬಂಗಾಳ ಕೊಲ್ಲಿಯ ಕಡೆಗೆ ವಿಸ್ತರಿಸುತ್ತದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ವರೆಗೆ ವಿಸ್ತರಿಸುತ್ತದೆ. ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಉತ್ತರ ಕರಾವಳಿ ಆಂಧ್ರಪ್ರದೇಶದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 5.8 ಮತ್ತು 7.6 ಕಿ.ಮೀ ನಡುವೆ ಮೇಲಿನ ವಾಯು ಸುಳಿಗಾಳಿಯು ಮುಂದುವರಿಯಲಿದೆ.

Karnataka Rain

ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಉತ್ತರ ಕರಾವಳಿ ಆಂಧ್ರಪ್ರದೇಶದ ಮೇಲೆ ಮೇಲಿನ ವಾಯು ಸುಳಿಗಾಳಿಯಿಂದ ದಕ್ಷಿಣ ಒಡಿಶಾ, ದಕ್ಷಿಣ ಛತ್ತೀಸ್‌ಗಢ, ತೆಲಂಗಾಣ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಮತ್ತು ದಕ್ಷಿಣ ಗುಜರಾತ್ ಪ್ರದೇಶದ ಮೂಲಕ ಈಶಾನ್ಯ ಅರೇಬಿಯನ್ ಸಮುದ್ರಕ್ಕೆ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ಒಂದು ಟ್ರಫ್ ಹರಿಯುತ್ತದೆ. ದಕ್ಷಿಣ ಛತ್ತೀಸ್‌ಗಢ ಮತ್ತು ಪಕ್ಕದ ತೆಲಂಗಾಣದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ಮೇಲಿನ ವಾಯು ಸುಳಿಗಾಳಿ ಅಥವಾ ಚಂಡಮಾರುತ ಪರಿಚಲನೆಯೊಂದಿಗೆ ವಿಲೀನಗೊಳ್ಳುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Karnataka Rain: ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಐಎಂಡಿ

ಇನ್ನು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಇರಲಿದೆ. ಜುಲೈ 21ರ ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇನ್ನು ಉಳಿದಂತೆ ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ.

ಮುಂದುವರಿದು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲೂ ಮಳೆ ಆಗಲಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಈ ಭಾಗದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದೆ. ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದಾದ್ಯಂತ ಸಾಮಾನ್ಯವಾಗಿತ್ತು. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ ?

ಮುಂದಿನ 24 ಗಂಟೆ ಅವಧಿಯಲ್ಲಿ ಬೆಂಗಳೂರಿನಲ್ಲಿ ಮಳೆ ಆಗಲಿದೆ. ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ಈ ಅವಧಿಯಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಸೆಲ್ಸಿಯಸ್‌ನಿಂದ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+