Karnataka Rain: ಬೆಂಗಳೂರು ಸೇರಿ ಕರ್ನಾಟಕದ 16 ಜಿಲ್ಲೆಗಳಲ್ಲಿ ಭಾರೀ ಮಳೆ ಐಎಂಡಿ ಮುನ್ಸೂಚನೆ
Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಮುಂದಿನ 3-4 ದಿನಗಳಲ್ಲಿ ಆಗ್ನೇಯ ಅರೇಬಿಯನ್ ಸಮುದ್ರ, ಕೊಮೊರಿನ್ ಪ್ರದೇಶ, ನೈಋತ್ಯ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಅಂಡಮಾನ್ ಸಮುದ್ರದ ಉಳಿದ ಭಾಗಗಳು ಮತ್ತು ಪೂರ್ವಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಪ್ರಬಲವಾಗುವ ಸಾಧ್ಯತೆ ಇದೆ. ಮೇ 26 ರಂದು ನೈಋತ್ಯ ಮಾನ್ಸೂನ್ ಕೇರಳದಲ್ಲಿ ತೀವ್ರವಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಪೂರ್ವ ಉತ್ತರ ಪ್ರದೇಶದಿಂದ ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕರ್ನಾಟಕದ ಒಳಭಾಗ ಮತ್ತು ಕೇರಳದಾದ್ಯಂತ ಲಕ್ಷದ್ವೀಪ ಪ್ರದೇಶಕ್ಕೆ ಟ್ರಾಫ್ ಹಾದುಹೋಗಲಿದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ವರೆಗೆ ವಿಸ್ತರಿಸುತ್ತದೆ. ಇನ್ನು ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ನೆರೆಹೊರಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 3.1 ಮತ್ತು 5.8 ಕಿ.ಮೀ ನಡುವೆ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಮುಂದುವರೆದಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮೇ 24ರ ವರೆಗೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ. ಬೆಂಗಳೂರಿನಲ್ಲಿ ಮಂಗಳವಾರ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಬುಧವಾರವೂ ಮಳೆ ಮುಂದುವರಿಯಲಿದೆ.

Karnataka Rain: ಕರ್ನಾಟಕದ 16 ಜಿಲ್ಲೆಗಳಲ್ಲಿ ಭಾರೀ ಮಳೆ
ಇನ್ನು ಬೆಂಗಳೂರು ಸೇರಿದಂತೆ ಕರ್ನಾಟಕದ . ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದೆ. ಕರ್ನಾಟಕದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಇನ್ನು ಕೊಪ್ಪಳ, ರಾಯಚೂರು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲೂ ಮಳೆ ಆರ್ಭಟ ಇರಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ. ಮೀ ವೇಗದಲ್ಲಿ ಇರಲಿದೆ. ಉಳಿದೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆ ಇರಲಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆ ಆಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಇನ್ನು ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3.0 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು -1.6 ಡಿಗ್ರಿ ಸೆಲ್ಸಿಯಸ್‌ನಿಂದ -3.0 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ಇನ್ನು ಉತ್ತರ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ -3.1 ಡಿಗ್ರಿ ಸೆಲ್ಸಿಯಸ್‌ನಿಂದ -5.0 ಡಿಗ್ರಿ ಸೆಲ್ಸಿಯಸ್ ಗಮನಾರ್ಹವಾಗಿ ಕಡಿಮೆಯಾಗಿದೆ. ನೈಜ ಸಮಯದ ದತ್ತಾಂಶದ ಆಧಾರದ ಮೇಲೆ, ರಾಜ್ಯದಾದ್ಯಂತ ಗರಿಷ್ಠ ತಾಪಮಾನವು 29.7- 42 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿತ್ತು.












Click it and Unblock the Notifications