Karnataka Rain: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ: ಐಎಂಡಿ
Karnataka Rain Alert: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಒಣಹವೆ ಮುಂದುವರಿದಿದ್ದು, ಚಳಿ ಪ್ರಮಾಣ ಅಲ್ಪ ಇಳಿಕೆಯಾಗಿದೆ. ಈ ನಡುವೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆಗುವ ನಿರೀಕ್ಷೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಹಿಂದೂ ಮಹಾಸಾಗರ ಮತ್ತು ಅದಕ್ಕೆ ಹೊಂದಿಕೊಂಡಿರುವ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಅದೇ ಪ್ರದೇಶದಲ್ಲಿ ಮುಂದುವದಿದೆ. ಸಂಬಂಧಿತ ಮೇಲ್ಭಾಗದ ವಾಯುವ್ಯ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ. ವರೆಗೆ ವಿಸ್ತರಿಸಿದೆ. ಇದು ಶ್ರೀಲಂಕಾದ ಕಡೆಗೆ ಪಶ್ಚಿಮ ವಾಯುವ್ಯಕ್ಕೆ ಚಲಿಸುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಕಡಿಮೆ ಗುರುತಿಸಲ್ಪಡುತ್ತದೆ.

ಇನ್ನು ಹಿಂದೂ ಮಹಾಸಾಗರ ಮತ್ತು ಅದಕ್ಕೆ ಹೊಂದಿಕೊಂಡಿರುವ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಹೊಸ ಮೇಲ್ಭಾಗದ ವಾಯುವ್ಯ ಚಂಡಮಾರುತದ ಪರಿಚಲನೆ ಉಂಟಾಗುತ್ತದೆ. ಇದರ ಪ್ರಭಾವದಡಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಅದೇ ಪ್ರದೇಶದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ನಂತರ ಅದು ಪಶ್ಚಿಮ ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ. ಮುಂದುವರಿದು ಹಿಂದೂ ಮಹಾಸಾಗರದ ಸಮಭಾಜಕ ವೃತ್ತ ಮತ್ತು ಬಂಗಾಳ ಕೊಲ್ಲಿಯ ಪಕ್ಕದ ನೈಋತ್ಯ ಭಾಗದಲ್ಲಿರುವ ಕಡಿಮೆ ಒತ್ತಡದ ಪ್ರದೇಶಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯಿಂದ ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳದಾದ್ಯಂತ ಲಕ್ಷದ್ವೀಪ ಪ್ರದೇಶದವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿ ಸಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3.0 ಡಿಗ್ರಿ ಸೆಲ್ಸಿಯಸ್ ಆಗಿದೆ. ದಕ್ಷಿಣ ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗದುನಾರ್ಹವಾಗಿ ಕಡಿಮೆ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯವಾಗಿತ್ತು. ರಾಜ್ಯದ ಸಮತಟ್ಟಾದ ಪ್ರದೇಶ ವಿಜಯಪುರದಲ್ಲಿ ಕನಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮುಂದಿನ 3 ದಿನಗಳ ಅವಧಿಯಲ್ಲಿ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಹವಾಮಾನ ಪರಿಸ್ಥಿತಿಯು ಹೇಗಿರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಮುಂದಿನ ಐದು ದಿನಗಳ ಹವಾಮಾನ ಪರಿಸ್ಥಿತಿ
ಇನ್ನು ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ವರೆಗೆ ಹವಾಮಾನದಲ್ಲಿ ಮಹತ್ವದ ಬದಲಾವಣೆಗಳು ಇಲ್ಲ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸಾಧಾರಣ ಪ್ರಮಾಣದ ಚಳಿ ಇರಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಮುಂದಿನ ಮೂರು ದಿನಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ
ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ಚಳಿ ಪ್ರಮಾಣ ಅಲ್ಪ ಇಳಿಕೆಯಾಗಿದ್ದು, ಬಿಸಿಲು ಹೆಚ್ಚಾಗುತ್ತಿದೆ. ಉಳಿದಂತೆ ಬೆಂಗಳೂರಿನಲ್ಲಿ ಬಹುತೇಕ ಒಣಹವೆ ಮುಂದುವರಿದಿದೆ. ಪ್ರಮುಖವಾಗಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಶುಭ್ರ ಆಕಾಶ ಇರಲಿದ್ದು, ಸಂಜೆ ಮತ್ತು ರಾತ್ರಿ ವೇಳೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾರಿ 31 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮುಂದುವರಿದು ಮುಂದಿನ 48 ಗಂಟೆಯ ಅವಧಿಯಲ್ಲೂ ಬಹುತೇಕ ಇದೇ ವಾತಾವರಣ ಮುಂದುವರಿಯಲಿದೆ. ಶುಭ್ರ ಆಕಾಶ ಇರಲಿದ್ದು, ಸಂಜೆ ಮತ್ತು ರಾತ್ರಿ ವೇಳೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾರಿ 31 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.












Click it and Unblock the Notifications