Karnataka Rain Update : ಮುಂದಿನ 24 ಗಂಟೆಗಳಲ್ಲಿ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಕರ್ನಾಟಕ ರಾಜ್ಯಾದ್ಯಂತ ಈಗಾಗಲೇ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೈಸೂರು, ಕೊಡಗು, ಬೆಂಗಳೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿಯ ಕೆಲವು ಭಾಗಗಳಲ್ಲಿ ಇಂದು ತಾಪಮಾನ ಸ್ವಲ್ಪ ಹೆಚ್ಚಾಗಬಹುದು ಎಂದು ಕೂಡ ಹವಾಮಾನ ಇಲಾಖೆ ತಿಳಿಸಿದೆ.

Karnataka Rain Alert: Many Districts Are Expected To Receive Heavy Rain In The Next 24 Hours

ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಹೇಳಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಹೆಚ್ಚಿನ ಮಳೆ ನಿರೀಕ್ಷೆ ಮಾಡಲಾಗಿದೆ.

ಕಳೆದ ಎರಡು ದಿನಗಳಿಂದ ರಾಜಧಾನಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಸೋಮವಾರ ರಾತ್ರಿ ಕೂಡ ಬೆಂಗಳೂರಿನ ಹಲವು ಭಾಗಗಳಲ್ಲಿ ಮಳೆಯಾಗಿದೆ. ಮಂಗಳವಾರ ಬೆಳಗ್ಗೆ ಕೂಡ ಹಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇಡೀ ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ರಾಜ್ಯದ ಹಲವು ಜಾಗಗಳಲ್ಲಿ ಮಳೆ

ಸೋಮವಾರ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ರಾಮನಗರ, ಹೊಸಕೋಟೆ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಶ್ರೀರಂಗಪಟ್ಟಣ, ರಾಯಚೂರು, ಕನಕಪುರ, ರಾಯಚೂರು, ಚಾಮರಾಜನಗರ, ಕನಕಪುರ, ಮೂಡಿಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಹಾಸನ, ರಾಯಚೂರು, ಯಾದಗಿರಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಮೇ 6ರಿಂದ ಸೈಕ್ಲೋನ್ ಮುನ್ನೆಚ್ಚರಿಕೆ

ಇನ್ನು ರಾಜ್ಯದಲ್ಲಿ ಮೇ 6ರಿಂದ ಸೈಕ್ಲೋನ್ ಆರಂಭವಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಲಿದ್ದು, ವಾಯುಭಾರ ಕುಸಿತವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+