Karnataka Rain : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಕರ್ನಾಟಕದ ಮಳೆ ವರದಿ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಕರ್ನಾಟಕ, ಗೋವಾ, ಮಹಾರಾಷ್ಟ್ರದ ಸಮುದ್ರ ತೀರ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರಿ ಮಳೆಯಿಂದಾಗಿ ಈ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಇರುವವಂತೆ ಹೇಳಲಾಗಿದೆ. ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ 151.5 ಮಿ.ಮೀ. ಮಳೆಯಾಗಿದೆ.

Karnataka Rain Alert

ಭಾರಿ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಪ್ರವಾಸಿಗರು, ಸ್ಥಳೀಯರಿಗೂ ಕೂಡ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಕೊಡಲಾಗಿದೆ. 40-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು ಭಾರಿ ಪ್ರಮಾಣದಲ್ಲಿ ಅಲೆಗಳು ಏಳಲಿವೆ ಎಂದು ಹೇಳಿದೆ.

ಮಲೆನಾಡು ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಲೆನಾಡಿನ ಹಲವು ಭಾಗಗಳಲ್ಲಿ ಉತ್ತಮ ಮಳೆಯಾದರೆ, ಇನ್ನೂ ಕೆಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.

ಅಂಕೋಲಾ, ಗೇರುಸೊಪ್ಪ, ಕಾರ್ಕಳ, ಉಡುಪಿ, ಗೋಕರ್ಣ, ಮಂಗಳೂರು, ಮುಲ್ಕಿ, ಪುತ್ತೂರು, ಸುಬ್ರಹ್ಮಣ್ಯ, ಧರ್ಮಸ್ಥಳ, ಮೂಡಿಗೆರೆ, ಕಳಸ, ಲಿಂಗನಮಕ್ಕಿ, ಕೊಟ್ಟಿಗೆಹಾರ, ಕೊಪ್ಪ,ಪಣಂಬೂರು, ಶೃಂಗೇರಿ ಸೇರಿದಂತೆ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು ಹವಾಮಾನ

ಉತ್ತರ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಹಲವು ಭಾಗಗಳಲ್ಲಿ ಜುಲೈ 14ರಂದು ಸಂಜೆ, ರಾತ್ರಿ ವೇಳೆಗೆ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಶುಕ್ರವಾರ ಸಂಜೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜರಾಜೇಶ್ವರಿ ನಗರದ ಕೆಂಗೇರಿಯಲ್ಲಿ 51 ಮಿ.ಮೀ. ಮಳೆಯಾಗಿದೆ.

ಇಂದು ಕೂಡ ರಾಜರಾಜೇಶ್ವರಿ ನಗರ, ದಾಸರಹಳ್ಳಿ, ವಿದ್ಯಾಪೀಠ, ನಾಯಂಡಹಳ್ಳಿ, ಕೆಂಗೇರಿ, ಜ್ಞಾನಭಾರತಿ, ಸಂಪಂಗಿರಾಮ ನಗರ, ಅಗ್ರಹಾರ, ಕೊಟ್ಟಿಗೆಪಾಳ್ಯ, ನಾಗರಬಾವಿ, ಹೊರಮಾವು, ವಿದ್ಯಾರಣ್ಯಪುರ, ಹೆಚ್‌ಎಎಲ್, ಮಾರತ್ ಹಳ್ಳಿ, ದೊಮ್ಮಲೂರು, ಕಾಟನ್‌ಪೇಟೆ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+