Karnataka Rain: ಕರ್ನಾಟಕದ ಈ ಭಾಗಗಳಲ್ಲಿ ಮುಂದಿನ 7 ದಿನ ಮಳೆ ಅಲರ್ಟ್‌; ನಿಮ್ಮ ಜಿಲ್ಲೆಯೂ ಇದೆಯಾ ಚೆಕ್ ಮಾಡಿ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದ್ದು, ಮುಂದಿನ ಏಳು ದಿನಗಳ ಕಾಲ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್ 7ರವರೆಗೆ ಹಲವೆಡೆ ಭಾರೀ ಮಳೆಯ ಮುನ್ಸೂಚನೆ ಇದ್ದು, ಆ ಜಿಲ್ಲೆಗಳನ್ನು ಇಲಾಖೆ ಪಟ್ಟಿ ಮಾಡಿದೆ. ಇದರಲ್ಲಿ ನಿಮ್ಮ ಜಿಲ್ಲೆಯೂ ಇದೆಯಾ? ಇಲ್ಲಿ ತಿಳಿದುಕೊಳ್ಳಿ.

ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ?

ಇಂದು ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Karnataka Rain

ದಕ್ಷಿಣ ಒಳನಾಡಿನ ತುಮಕೂರು, ಚಿತ್ರದುರ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಮಳೆ ಎಲ್ಲಿ ಎಷ್ಟು?

ಕರ್ನಾಟಕದಾದ್ಯಂತ ಮುಂಗಾರು ಚಟುವಟಿಕೆಗಳು ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿರುವ ಐಎಂಡಿ ವರದಿ ಮಾಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಿದೆ. ರಾಯಚೂರು ಜಿಲ್ಲೆಯಲ್ಲಿ ಅತ್ಯಂತ ಗರಿಷ್ಠ ಮಳೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ 4 ಸೆಂ.ಮೀ ಮಳೆ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಬೆಳ್ಳೂರು, ದಕ್ಷಿಣ ಕನ್ನಡದ ಬೆಳ್ತಂಗಡಿ, ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ಹಾಗೂ ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಚಾಮರಾಜನಗರದ ಬಂಡೀಪುರ, ಮೈಸೂರಿನ ಕೆ.ಆರ್. ನಗರ, ಯಾದಗಿರಿಯ ಕೆಂಭಾವಿ, ಚಿಕ್ಕಮಗಳೂರಿನ ಎನ್.ಆರ್.ಪುರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ತಲಾ 2 ಸೆಂ.ಮೀ ಮಳೆ ದಾಖಲಾಗಿದೆ. ಬಂಟ್ವಾಳ, ಧರ್ಮಸ್ಥಳ ಮತ್ತು ಮಾಣಿ, ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ ಮತ್ತು ಹೊಸಕೋಟೆ, ಮಲೆ ಮಹದೇಶ್ವರ ಬೆಟ್ಟ, ಮಂಡ್ಯದ ನಾಗಮಂಗಲ, ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಪ್ರಭಾವ ಹೆಚ್ಚಾಗಿ ಕಂಡುಬಂದಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆಯ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಮುಂದಿನ ದಿನಗಳಲ್ಲೂ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಚಲನೆ ಹೇಗಿದೆ?

ಮುಂದಿನ 2ರಿಂದ 3 ದಿನಗಳಲ್ಲಿ ನೈಋತ್ಯ ಮುಂಗಾರು ಮಾರುತಗಳು ದೇಶದ ಮತ್ತಷ್ಟು ಭಾಗಗಳಿಗೆ ವಿಸ್ತರಿಸಲು ವಾತಾವರಣವು ಅತ್ಯಂತ ಪೂರಕವಾಗಿದೆ. ಇದರ ಪ್ರಭಾವದಿಂದ ಮುಂಗಾರು ನೈಋತ್ಯ ಮತ್ತು ಆಗ್ನೇಯ ಅರಬ್ಬಿ ಸಮುದ್ರದ ಹೆಚ್ಚಿನ ಭಾಗಗಳು, ಲಕ್ಷದ್ವೀಪ ಮುಳುಗಡೆ ಪ್ರದೇಶಗಳು, ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳು, ಬಂಗಾಳ ಕೊಲ್ಲಿಯ ನೈಋತ್ಯ, ಮಧ್ಯ-ಪಶ್ಚಿಮ, ಮಧ್ಯ-ಪೂರ್ವ ಮತ್ತು ಈಶಾನ್ಯ ಭಾಗಗಳು ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯ ಉಳಿದ ಪ್ರದೇಶಗಳಿಗೆ ಮುನ್ನಡೆಯಲಿದೆ.

ಸೈಕ್ಲೋನಿಕ್ ಪರಿಚಲನೆಯು ಪೂರ್ವ ವಿದರ್ಭದಿಂದ ಆರಂಭವಾಗಿ ತೆಲಂಗಾಣ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ತಮಿಳುನಾಡು ಹಾಗೂ ಪುದುಚೇರಿ ಮೂಲಕ ದಕ್ಷಿಣ ಕೇರಳದವರೆಗೆ ವಿಸ್ತರಿಸಿದೆ. ಇದು ಸಮುದ್ರ ಮಟ್ಟದಿಂದ ಸುಮಾರು 1.5 ಕಿ.ಮೀ ಎತ್ತರದಲ್ಲಿದೆ. ದಕ್ಷಿಣ ಕೇರಳ ಮತ್ತು ಅದಕ್ಕೆ ಹೊಂದಿಕೊಂಡಂತಿರುವ ತಮಿಳುನಾಡು ವಲಯದ ಮೇಲೆ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಮೇಲ್ಮೈ ಹವಾಮಾನ ಸುಳಿಗಾಳಿ ಸೃಷ್ಟಿಯಾಗಿದೆ.

ಮಧ್ಯ-ಪೂರ್ವ ಮತ್ತು ಈಶಾನ್ಯ ಬಂಗಾಳ ಕೊಲ್ಲಿಯಲ್ಲಿದ್ದ ಸುಳಿಗಾಳಿಯು ಈಗ ಉತ್ತರ-ಪೂರ್ವ ಮತ್ತು ಅದಕ್ಕೆ ಹೊಂದಿಕೊಂಡಿರುವ ಮಧ್ಯ-ಪೂರ್ವ ಬಂಗಾಳ ಕೊಲ್ಲಿಯತ್ತ ಚಲಿಸಿದ್ದು, ಸಮುದ್ರ ಮಟ್ಟದಿಂದ 4.5 ಕಿ.ಮೀ ಎತ್ತರದವರೆಗೆ ವ್ಯಾಪಿಸಿದೆ. ನೈಋತ್ಯ ಅರಬ್ಬಿ ಸಮುದ್ರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೊಂದು ಸುಳಿಗಾಳಿ ಮುಂದುವರಿದಿದ್ದು, ಇದು ಸಮುದ್ರ ಮಟ್ಟದಿಂದ 3.1 ಕಿ.ಮೀನಿಂದ 5.8 ಕಿ.ಮೀ ಎತ್ತರದಲ್ಲಿ ಗೋಚರಿಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+