Karnataka Rain: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ; ಮನೆಯಿಂದ ಹೊರಬರುವ ಮುನ್ನ ಹುಷಾರ್!
ಕರ್ನಾಟಕದಲ್ಲಿ ಅಂತೂ ಇಂತೂ ವರುಣ ಕಾಲಿಟ್ಟಾಗಿದೆ. ಅದೂ ಲೇಟಾಗಿ ಬಂದ್ರೂ ತುಸು ಜನರ ಮುಖದಲ್ಲಿ ಮಂದಹಾಸ ಮೂಡಿಸುವ ಕೆಲಸವನ್ನು ಮಾಡಿದ್ದಾನೆ. ಭಾನುವಾರ ರಾತ್ರಿ ಸುರಿದ ಮಳೆ ಬೆಂಗಳೂರಿನ ಜನರಿಗೆ ಆನಂದವನ್ನು ತಂದರೆ, ಇನ್ನೊಂದು ಕಡೆ ಪಡಿಪಾಟಲನ್ನು ಸಹ ತಂದಿದೆ. ಭಾರಿ ಗುಡುಗು ಸಹಿತ ಮಳೆಗೆ ನಗರದ ಹಲವು ಪ್ರದೇಶಗಳಲ್ಲಿ ಗಿಡ, ಮರಗಳು ಬಿದ್ದು ಅವಾಂತರ ಸೃಷ್ಟಿಯಾಗಿದೆ.
ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇನ್ನು ರಾಜ್ಯಧಾನಿ ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇನ್ನು ಕೆಲ ದಿನ ಮಳೆ ತನ್ನ ಕಾಯಕವನ್ನು ಮುಂದುವರೆಸಲಿದೆ. ಅಲ್ಲದೆ ಈ ವೇಳೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಸಹ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ರಾಜ್ಯದ ಹಲವು ಭಾಗಗಳಿಗೂ ಹವಾಮಾನ ಇಲಾಖೆ ನೀಡಿರುವ ಸೂಚನೆ ಖುಷಿ ನೀಡಿದೆ. ಅಲ್ಲದೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದು, ಮುಂಗಾರು ಕೆಲಸ ಚುರುಕುಗೊಳ್ಳುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಮತ್ತು ವಿಜಯಾಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದಾಗಿ ಇಲಾಖೆ ಹೇಳಿದೆ.












Click it and Unblock the Notifications