Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ
ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.
ಕಳೆದ 24 ಗಂಟೆಯಲ್ಲಿ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಹಡವನಹಳ್ಳಿಯಲ್ಲಿ ಅತ್ಯಧಿಕ ಎಂದರೆ 109ಮಿಮೀ ಮಳೆಯಾಗಿದೆ ಎಂದು ಹಮಾವಾನ ಇಲಾಖೆ ಹೇಳಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಹದೇವಪುರದ ವರ್ತೂರು ಪ್ರದೇಶದಲ್ಲಿ ಕಳೆದ 24 ಗಂಟೆಯಲ್ಲಿ 14ಮಿಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.

ಸಾಧಾರಣ ಮಳೆಯಾಗುವ ಸಾಧ್ಯತೆ
ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಆದರೆ ಶುಕ್ರವಾರ, ಶನಿವಾರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಹಾಸನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಭಾರಿ ಗಾಳಿ ಬೀಸುತ್ತಿದೆ. ಮಳೆಯಾಗುವ ಸಂದರ್ಭದಲ್ಲಿ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಕರಾವಳಿ ಭಾಗದಲ್ಲಿ ಕೂಡ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ಮಂಗಳೂರು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುಡುಗು ಮುಂಸು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಹುಬ್ಬಳ್ಳಿ, ಧಾರವಾಡ, ಬೀದರ್, ವಿಜಯಪುರ, ಬಳ್ಳಾರಿ, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮಳೆ ಅಬ್ಬರ ಕಡಿಮೆ
ಬೆಂಗಳೂರಿನಲ್ಲಿ ಕೂಡ ಮಳೆಯ ಅಬ್ಬರ ಕಡಿಮೆಯಾಗಲಿದೆ. ಬಿಬಿಎಂಪಿ ವ್ಯಾಪ್ತಿಯ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಾತ್ರಿ ವೇಳೆಗೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಬೀಳಲಿದೆ.












Click it and Unblock the Notifications