Karnataka Rain: ಇನ್ನೂ ನಾಲ್ಕು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಮೂರು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಭರ್ಜರಿ ಮಳೆ ಸುರಿಯುತ್ತಿದೆ. ಬೆಂಗಳೂರು, ಮೈಸೂರು, ತುಮಕೂರು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗಿದೆ. ಬಿರುಗಾಳಿಯಿಂದಾಗಿ ಹಲವು ಕಡೆಗಳಲ್ಲಿ ಮರಗಳು ಧರೆಗುರುಳಿವೆ.

Karnataka Rain: Coastal And South Interier Disticsts Likely Recieve Heavy Rain for Next 4 Days

ಮುಂದಿನ ನಾಲ್ಕು ದಿನಗಳು ಮಳೆ ಮುಂದುವರೆಲಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಮೈಸೂರು, ಚಾಮರಾಜನಗರ, ರಾಮನಗರ, ಹಾಸನ ಜಿಲ್ಲೆಯ ಹಲವು ಭಾಗಗಳಲ್ಲಿ ಉತ್ತಮ ಮಳೆ ಬೀಳುವ ಸಾಧ್ಯತೆ ಇದೆ.

ಮಳೆಯ ಸಂದರ್ಭದಲ್ಲಿ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಮರಗಳ ಬಳಿ ವಾಹನ ನಿಲ್ಲಿಸುವುದನ್ನು ತಪ್ಪಿಸಬೇಕು, ಮಳೆಯ ಸಂದರ್ಭದಲ್ಲಿ ಪ್ರಯಾಣವನ್ನು ಆದಷ್ಟು ತಪ್ಪಿಸಿ ಎಂದು ಮನವಿ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಭಾಗದಲ್ಲಿ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ಮಂಗಳೂರು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಉತ್ತಮ ಮಳೆ

ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ವ್ಯಾಪಕ ಮಳೆಯಾದ ನಂತರ ಎರಡು ದಿನ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಗುರುವಾರ ಸಂಜೆ ಕೂಡ ನಗರದ ಹಲವು ಭಾಗಗಳಲ್ಲಿ ಸಾಧಾರಣ ಅಥವಾ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ನಾಲ್ಕು ದಿನಗಳ ಕಾಲ ರಾಜಧಾನಿಯಲ್ಲಿ ಮಳೆ ಮುಂದುವರೆಯಲಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ತಾಪಮಾನ ಕೂಡ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹುಬ್ಬಳ್ಳಿ, ಧಾರವಾಡ, ಬೀದರ್, ವಿಜಯಪುರ, ಬಳ್ಳಾರಿ, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಒಣಹವೆ ಮುಂದುವರೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+