Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?
ಬೆಂಗಳೂರು, ಡಿಸೆಂಬರ್ 09: ರಾಜ್ಯದಲ್ಲಿ ಈ ವರ್ಷ ವಾಡಿಕೆಯಂತೆ ಮಳೆಯಾಗದ ಹಿನ್ನಲೆ ರೈತರು ಕಂಗಾಲಾಗಿದ್ದು, ರಾಜ್ಯದ ಪ್ರಮುಖ ಜಲಾಶಯಗಳು ಬರಿದಾಗಿವೆ. ಕಳೆದ ತಿಂಗಳಿನಿಂದ ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದ್ದು, ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಅಲ್ಲದೇ ಉಳಿದಂತೆ ಬಾಗಲಕೋಟೆ, ಬೀದರ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications