Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ

Karnataka Rain: ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗುತ್ತಿದೆ. ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಸಂಕಷ್ಟ ಎದುರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದಕ 207 ತಾಲ್ಲೂಕುಗಳಲ್ಲಿ ಈ ವರ್ಷದಲ್ಲಿ ಮಳೆ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸಂಪುಟ ಉಪ ಸಮಿತಿಯಿಂದ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ.

ಇನ್ನು ಈಗಾಗಲೇ ಈ ವರ್ಷ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿದೆ. ಇದು ಇನ್ನೂ ತೀವ್ರವಾಗಿ ಇರಲಿದೆ ಎಂದು ಅಂದಾಜಿಸಲಾಗಿದೆ. ಹೀಗಾಗಿ, ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಮುಖ್ಯವಾಗಿ ಈ ಬಾರಿ ಕರ್ನಾಟಕದಲ್ಲಿ ಬೇಸಿಗೆ ಸಮಯದಲ್ಲಿ 207 ತಾಲ್ಲೂಕುಗಳ ಕೆಲ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಅಂದಾಜಿಸಲಾಗಿದೆ. ವಿವಿಧ ಪ್ರದೇಶಗಳಲ್ಲಿ ನೀರಿನ ಅಭಾವ ಎದುರಾಗುವ ಸಾಧ್ಯತೆಯಿದೆ.

Karnataka Rain

ಕರ್ನಾಟಕದ 60 ತಾಲ್ಲೂಕುಗಳಲ್ಲಿ ನೀರಿನ ಕೊರತೆ

ಇನ್ನು 2026ನೇ ಸಾಲಿನಲ್ಲಿ ಕರ್ನಾಟಕದಕ 207 ತಾಲ್ಲೂಕುಗಳಲ್ಲಿ ಈ ವರ್ಷದಲ್ಲಿ ಮಳೆ ಕೊರತೆ ಎದುರಾಗಲಿದ್ದು, ಅದರಲ್ಲಿ 60 ತಾಲ್ಲೂಕುಗಳಲ್ಲಿ ನೀರಿನ ಕೊರತೆ ಇರಲಿದೆ ಎಂದು ಹೇಳಲಾಗಿದೆ. ಹೀಗಾಗಿ, ಕುಡಿಯುವ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಈಗಾಗಲೇ ರಾಜ್ಯದ 60 ತಾಲ್ಲೂಕುಗಳಲ್ಲಿ ನೀರಿನ ಕೊರತೆ ಎದುರಾಗಿದೆ. ಈ ಪ್ರದೇಶಗಳಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವುದಕ್ಕೆ ಉದ್ದೇಶಿಸಲಾಗಿದೆ.

ಕರ್ನಾಟಕ ಸರ್ಕಾರ ನೀಡಿರುವ ಪ್ರಮುಖ ಸೂಚನೆಗಳು

ಇನ್ನು ಕರ್ನಾಟಕ ಸರ್ಕಾರವು ಈ ಬಾರಿ 207 ತಾಲ್ಲೂಕುಗಳಲ್ಲಿ ಈ ವರ್ಷದಲ್ಲಿ ಮಳೆ ಕೊರತೆ ಇರುವ ಹಿನ್ನೆಯಲ್ಲಿ ಕೆಲವೊಂದು ಪ್ರಮುಖ ಸೂಚನೆಗಳನ್ನು ನೀಡಿದೆ.

1. ಈಗ ಕರ್ನಾಟಕದ 60 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ.

2. ಜಲಾಶಯಗಳಲ್ಲಿ ಕುಡಿಯುವ ನೀರಿಗೆ ಆದ್ಯತೆ ನೀಡಲು ಸೂಚನೆ.

3. ಜಾನುವಾರುಗಳಿಗೆ ಮೇವು ಲಭ್ಯತೆಯ ಬಗ್ಗೆ ನಿರಂತರ ಮೇಲ್ವಿಚಾರಣೆ ನಡೆಸುವುದಕ್ಕೆ ಅಧಿಕಾರಿಗಳಿಗೆ ಸೂಚನೆ.

4. ಮನರೇಗಾ ಯೋಜನೆಯ ಅಡಿಯಲ್ಲಿ ಜಲ ಸಂರಕ್ಷಣಾ ಕಾಮಗಾರಿಗೆ ಒತ್ತು ನೀಡಲು ನಿರ್ದೇಶನ

ಸಚಿವರ ನೇತೃತ್ವದಲ್ಲಿ ಸಭೆ

ಇನ್ನು ಈ ಬಾರಿ ಕರ್ನಾಟಕದಲ್ಲಿ ಮಳೆ ಕೊರತೆ ಹಾಗೂ 200ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಸಲು ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಈಚೆಗೆ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಮಹತ್ವದ ನಿರ್ದೇಶನಗಳನ್ನು ನೀಡಲಾಗಿದೆ.

ಕರ್ನಾಟಕದಲ್ಲಿ ಪೂರ್ವ ಮುಂಗಾರು ಹೇಗಿತ್ತು

ಇನ್ನು ಕರ್ನಾಟಕದಲ್ಲಿ ಪೂರ್ವ ಮುಂಗಾರಿನ ಅವಧಿಯಲ್ಲಿ 17 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಿದೆ. 5 ಜಿಲ್ಲೆಗಳಲ್ಲಿ ಅಧಿಕ, 6 ಜಿಲ್ಲೆಗಳಲ್ಲಿ ವಾಡಿಕೆ ಹಾಗೂ 3 ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಆಗಿದೆ ಎಂದು ವರದಿಯಾಗಿದೆ. ಇದೀಗ ಕರ್ನಾಟಕದಲ್ಲಿ ಮತ್ತೆ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಸುಧಾರಿಸಬಹುದು ಎನ್ನುವ ನಿರೀಕ್ಷೆಯೂ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+