Karnataka Rain: ಸೈಕ್ಲೋನ್ ಪ್ರಭಾವ: ರಾಜ್ಯದಲ್ಲಿ ಧಾರಾಕಾರ ಮಳೆ, ಈ ಜಿಲ್ಲೆಗಳಲ್ಲಿ ಆರೆಂಜ್ & ಯೆಲ್ಲೋ ಅಲರ್ಟ್!
Karnataka Rain: ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕು ಪಡೆದುಕೊಂಡಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಮುಂದಿನ ಎರಡು ದಿನಗಳ ಅವಧಿಗೆ ಬೆಂಗಳೂರು ಸೇರಿ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎಲ್ಲೆಲ್ಲಿ ಮಳೆ ಆಗಲಿದೆ ಎನ್ನುವ ವಿವರ ಇಲ್ಲಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಪಡೆದುಕೊಂಡಿದೆ. ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರು ಸೇರಿ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಧಾರಾಕಾರ ಮಳೆ ಮುಂದುವರಿದಿದೆ. ಹೀಗಾಗಿ ಈ ಭಾಗದಲ್ಲಿ ಆರೆಂಜ್ ಅಲರ್ಟ್ ಕೊಡಲಾಗಿದೆ. ಬೆಂಗಳೂರಿನಲ್ಲೂ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಜುಲೈ 18 ಹಾಗೂ 19 ರಂದು ಸಹ ಕರ್ನಾಟಕದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಸಾಧಾರಣ ಮಳೆ ಆಗಲಿದೆ. ಅಲ್ಲದೇ ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು ಹಾಗೂ ಕೋಲಾರ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು. ಈ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಅವಧಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಕರ್ನಾಟಕದಾದ್ಯಂತ ನೈಋತ್ಯ ಮಾನ್ಸೂನ್ ಪ್ರಬಲವಾಗಿದೆ ಮತ್ತು ಒಳನಾಡಿನ ಕರ್ನಾಟಕದಾದ್ಯಂತ ದುರ್ಬಲವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದ್ದು. ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಇರಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಇರಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಈ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗ, ತುಮಕೂರು, ರಾಮನಗರ, ಬಳ್ಳಾರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ರಿಪೋರ್ಟ್ ಹೇಳಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications