Karnataka Rain: ಚಂಡಮಾರುತ ಪ್ರಸರಣ ಪ್ರಭಾವ - ಮಾನ್ಸೂನ್ ಪ್ರವೇಶ: ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ 7ದಿನ ಭಾರೀ ಮಳೆ

Karnataka Rain: ಚಂಡಮಾರುತ ಪ್ರಸರಣದ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ನೈರುತ್ಯ ಮಾನ್ಸೂನ್ ಕೇರಳಕ್ಕೆ ಪ್ರವೇಶಿಸುವುದಕ್ಕೆ ದಿನಗಣನೆ ಪ್ರಾರಂಭವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ನೈರುತ್ಯ ಮಾನ್ಸೂನ್ ಕರ್ನಾಟಕ ಪ್ರವೇಶ ಮಾಡಲಿದೆ. ಈ ನಡುವೆ ಚಂಡಮಾರುತದ ಪ್ರಭಾವದಿಂದಾಗಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ (ಉತ್ತರ) ಪ್ರದೇಶ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಆಗ್ನೇಯ ಅರೇಬಿಯನ್ ಸಮುದ್ರ, ಕೊಮೊರಿನ್ ಪ್ರದೇಶ, ನೈಋತ್ಯ ಮತ್ತು ಆಗ್ನೇಯ ಬಂಗಾಳಕೊಲ್ಲಿಯ ಕೆಲವು ಭಾಗಗಳು - ಅಂಡಮಾನ್ ಸಮುದ್ರದ ಉಳಿದ ಭಾಗಗಳು ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ನೈಋತ್ಯ ಮಾನ್ಸೂನ್ ಪ್ರಭಾವವು ಅನುಕೂಲಕರವಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮೇ 26ರ ವರೆಗೆ ಮಳೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಯಾವ ಜಿಲ್ಲೆಗಳಲ್ಲಿ ಮಳೆ ?

ಬೆಂಗಳೂರು ಸೇರಿದಂತೆ ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಏಳು ದಿನಗಳ ಅವಧಿಗೆ ಕರಾವಳಿ ಜಿಲ್ಲೆಗಳು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಇರಲಿದೆ ಎಂದು ಹೇಳಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಈ ಜಿಲ್ಲೆಗಳಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಇನ್ನು ಕರ್ನಾಟಕ ಉತ್ತರ ಒಳನಾಡಿನ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲೂ ಮಳೆ ಇರಲಿದೆ. ಮುಂದುವರಿದು ಧಾರವಾಡ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲೂ ಮಳೆ ಆಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

Karnataka Rain

ಹವಾಮಾನ ಹೇಗೆ ಇರಲಿದೆ ?

ಇನ್ನು ಮುಂದಿನ ಐದರಿಂದ ಏಳು ದಿನಗಳ ವರೆಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಆದರೆ ಭಾರೀ ಮಳೆಯ ಕಾರಣಕ್ಕೆ ಮೀನುಗಾರರಿಗೆ ಎಚ್ಚರಿಕೆ ಕೊಡಲಾಗಿದೆ. ಮೇ 21ರಂದು ಕರ್ನಾಟಕ ಕರಾವಳಿ ಮತ್ತು ಇನ್ನುಳಿದ ಪ್ರದೇಶಗಳಲ್ಲಿ ಗಾಳಿಯ ವೇಗವು 40ರಿಂದ 50 ಕಿ.ಮೀ ವರೆಗೆ ಹಾಗೂ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿಯ ವೇಗವು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಬೆಂಗಳೂರಿನ ವಾತಾವರಣ ಹೇಗಿರಲಿದೆ

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದಲೂ ಬಿಸಿಲಿನ ತಾಪಮಾನವು ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕಳೆದ ಎರಡು ದಿನಗಳಿಂದಲೂ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಇನ್ನು ಮುಂದಿನ ಎರಡು ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ - ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಬದಲಾಗುವ ಸಾಧ್ಯತೆ ಇದೆ. ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಗಾಳಿಯ ವೇಗವು ಗಂಟೆಗೆ 50ರಿಂದ 60 ಕಿ.ಮೀ ವೇಗದಲ್ಲಿ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32ರಿಂದ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+