Karnataka Rain: ವಾಯು ಚಂಡಮಾರುತ ಪರಿಚಲನೆ ಪ್ರಭಾವ ಕರ್ನಾಟಕದ ಈ ಭಾಗಗಳಲ್ಲಿ ಭಾರೀ ಮಳೆ; ಕರಾವಳಿಯಲ್ಲಿ ಮೇಘಸ್ಫೋಟ!
Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಸಾಧಾರಣ ಮಳೆ ಮುಂದುವರಿದಿದೆ. ವಾಯು ಚಂಡಮಾರುತ ಪರಿಚಲನೆಯ ಪ್ರಭಾವದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಆಗಸ್ಟ್ 10ರ ವರೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಚುರುಕು ಪಡೆದುಕೊಂಡಿವೆ. ಕರ್ನಾಟಕದ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿಚಾರದ ವಿವಾದವೂ ಸಹ ಸದ್ಯಕ್ಕೆ ತಣ್ಣಗಾಗಿಗೆ. ಆಗಸ್ಟ್ 1ರಿಂದ ಕರ್ನಾಟಕವೂ ತಮಿಳುನಾಡಿಗೆ ಹೆಚ್ಚು ನೀರು ಬಿಡುತ್ತಿದೆ. ಈ ನಡುವೆ ಕರ್ನಾಟಕದ ಕರಾವಳಿಯಲ್ಲಿ ನೈಋತ್ಯ ಮಾನ್ಸೂನ್ ತೀವ್ರವಾಗಿತ್ತು. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲೂ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಮೇಘಸ್ಫೋಟ ಸಂಭವಿಸಿದೆ. ಇದೇ ಮೊದಲ ಬಾರಿಗೆ ದಾಖಲೆಯ 189 ಮಿ.ಮೀ ಮಳೆ ಆಗಿದೆ ಇದು ರಾಜ್ಯದಲ್ಲೇ ಗರಿಷ್ಠ ಪ್ರಮಾಣವಾಗಿದೆ.

ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ಚುರುಕು ಪಡೆದುಕೊಂಡಿದ್ದು, ಬೆಂಗಳೂರ ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ. ಸರಾಸರಿ ಸಮುದ್ರ ಮಟ್ಟದಲ್ಲಿ ಮಾನ್ಸೂನ್ ತೊಟ್ಟಿ ಈಗ ಅನುಷ್‌ಗಢ, ದೆಹಲಿ, ಶಹಜಹಾನ್‌ಪುರ, ಬಸ್ತಿ, ಚಾಪ್ರಾ ಮೂಲಕ ಹಾದುಹೋಗುತ್ತದೆ ಮತ್ತು ಅಲ್ಲಿಂದ ಪೂರ್ವಕ್ಕೆ ನಾಗಾಲ್ಯಾಂಡ್ ಕಡೆಗೆ ಹೋಗುತ್ತದೆ.
ಕರ್ನಾಟಕದ ದಕ್ಷಿಣ ಒಳನಾಡು ಮತ್ತು ನೆರೆಹೊರಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ಮೇಲ್ಬಾಗದ ವಾಯು ಚಂಡಮಾರುತದ ಪರಿಚಲನೆ ಇರಲಿದೆ. ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಕರಾವಳಿ ಅಂಧ್ರಪ್ರದೇಶದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 4.5 ಕಿ.ಮೀ ಎತ್ತರದಲ್ಲಿ ಮೇಲ್ಬಾಗದ ವಾಯು ಚಂಡಮಾರುತದ ಪರಿಚಲನೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳಲ್ಲಿ ಭಾರೀ ಮಳೆ: 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ವಾಯು ಚಂಡಮಾರುತದ ಪರಿಚಲನೆ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಆಗಸ್ಟ್ 5ರ ಬುಧವಾರ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.
Karnataka Rain: ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ
ಇನ್ನು ಬೆಂಗಳೂರಿನ ವಿವಿಧ ಭಾಗದಲ್ಲೂ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಮುಂದಿನ 24 ಗಂಟೆ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಇರಲಿದೆ. ಸಾಮಾನ್ಯವಾಗಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಉಳಿದಂತೆ ಬೆಂಗಳೂರಿನಲ್ಲಿ ತಂಪಾದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.


Click it and Unblock the Notifications
