Karnataka Rain: ಕರ್ನಾಟಕದಲ್ಲಿ ಈ ಬಾರಿ ಮಳೆ ಕೊರತೆ ಮುನ್ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು

Karnataka Rain: ಈ ಬಾರಿ ಕರ್ನಾಟಕದಲ್ಲಿ ಮಳೆ ಕೊರತೆಯಾಗಲಿದೆ ಎಂಬ ಮುನ್ಸೂಚನೆ ಇದೆ. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ 50ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಶ್ರೀ ಭಕ್ತ ಕನಕದಾಸರ ಮಹಾದ್ವಾರದ ಉದ್ಘಾಟನೆ ಹಾಗೂ ಧರ್ಮಸಭೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದು, ಕರ್ನಾಟಕದಲ್ಲಿ ಮಳೆ ಕೊರತೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ನಿಟ್ಟೂರಿನ ದೇವಸ್ಥಾನಕ್ಕೆ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸುತ್ತಾರೆ. ಬೀರಲಿಂಗೇಶ್ವರ ದೇವಸ್ಥಾನ ನಿಟ್ಟೂರಿಗೆ ಮಾತ್ರ ಸೀಮಿತವಾಗಿಲ್ಲ. ದೇವನೊಬ್ಬ ನಾಮ ಹಲವು ಎಂದು ಅರ್ಥೈಸಿಕೊಳ್ಳುವಂತೆ, ಭಗವಂತ ವಿಶ್ವವ್ಯಾಪಿಯಾಗಿದ್ದಾನೆ.

Karnataka Rain

ನಮ್ಮ ನಾಡು, ನಮ್ಮ ದೇಶ ಸರ್ವಜನಾಂಗದ ಶಾಂತಿಯ ತೋಟವಾಗಬೇಕೆಂದು ಬುದ್ಧ, ಬಸವ, ಮಹಾತ್ಮ ಗಾಂಧಿ, ಅಂಬೇಡ್ಕರ್, ಕುವೆಂಪು ಬಯಸಿದ್ದರು. ಅದನ್ನೇ ನಮ್ಮ ಸರ್ಕಾರ ಪಾಲಿಸುತ್ತಿದೆ. ಕೇವಲ 13 ಕುರುಬರ ಕುಟುಂಬಗಳಿರುವ ಊರಿನಲ್ಲಿ ಬೀರಲಿಂಗೇಶ್ವರ ದೇವಾಲಯ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವುದು ನಿಟ್ಟೂರಿನ ಸಾಮರಸ್ಯಕ್ಕೆ ದ್ಯೋತಕವಾಗಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಎಂಬ ವಿಚಾರಗಳು ಸಂವಿಧಾನದ ಆಧಾರ ಸ್ತಂಭಗಳು. ದೇವರ ಪೂಜೆ ಮಾಡಬೇಕು ಆದರೆ ಮೂಢ ನಂಬಿಕೆಗಳನ್ನು ಇಟ್ಟುಕೊಳ್ಳಬಾರದು. ಬಸವಣ್ಣ ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು ಎನ್ನುವುದನ್ನು ನಾವು ನೀವು ಮರೆಯಬಾರದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮುಂದುವರಿದು ಇಸ್ಲಾಂ, ಹಿಂದೂ, ಕ್ರಿಶ್ಚಿಯನ್ ಧರ್ಮಗಳು ಜನರನ್ನು ಪ್ರೀತಿಸಬೇಕೆಂದು ಬೋಧಿಸುತ್ತವೆ. ಇದಾದಾಗ ಮಾತ್ರ ಮಾನವ ಸಮಾಜ ನಿರ್ಮಾಣ ಸಾಧ್ಯ.‌ ಸೈದ್ಧಾಂತಿಕವಾಗಿ ಯಾರೇ ನಮ್ಮ ವಿರೋಧಿಗಳಾದರೂ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಕುಲದ ನೆಲೆಯನ್ನು ಬಲ್ಲಿರಾ ಎಂಬ ಕನಕದಾಸರ ಸಾಲು ಹಾಗೂ ಇವ ನಮ್ಮವ ಎಂಬ ಬಸವಣ್ಣನ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉನ್ನತ ವಿದ್ಯೆ ಕಲಿತವರೇ ಜಾತಿ ವ್ಯವಸ್ಥೆಯನ್ನು ಪೋಷಿಸುವುದು ನಮ್ಮ ಸಮಾಜದ ದುರಂತ. ದಯೆ, ಕರುಣೆಗಳೇ ಧರ್ಮದ ಮೂಲವಾಗಬೇಕು ಎಂಬ ಬಸವಣ್ಣನವರ ಮಾತುಗಳನ್ನು ಪಾಲಿಸಬೇಕು ಎಂದಿದ್ದಾರೆ.

ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ನಮ್ಮ ಸರ್ಕಾರ ಸರ್ವ ಜನಾಂಗದ ಶಾಂತಿಯ ತೋಟವಾಗಿಸಬೇಕೆನ್ನುವ ಉದ್ದೇಶ ಹೊಂದಿದ್ದು, ನಾನೂ ಕೂಡ ಬಸವಣ್ಣನ ಅನುಯಾಯಿ. ಈ ಬಾರಿ ಮಳೆ ಕೊರತೆಯಾಗಲಿದೆ ಎಂಬ ಮುನ್ಸೂಚನೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿಸಲಾಗಿದೆ. ರಾಣೇಬೆನ್ನೂರಿನ ವರ್ತುಲ ರಸ್ತೆ ಹಾಗೂ ಸಮುದಾಯ ಭವನಕ್ಕೆ ಅನುದಾನ ನೀಡಲಾಗುವುದು ಎಂದೂ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+