Karnataka Rain: ದೀಪಾವಳಿ ಹಬ್ಬಕ್ಕೆ ವರುಣನ ಕರಿನೆರಳು: ಈ ಭಾಗಗಳಲ್ಲಿ ಧಾರಾಕಾರ ಮಳೆಯ ಎಚ್ಚರಿಕೆ!

ಬೆಂಗಳೂರು, ಅಕ್ಟೋಬರ್‌ 29: ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲು ದೇಶದೆಲ್ಲೆಡೆ ಸಕಲ ಸಿದ್ಧತೆಗಳು ನಡೆದಿವೆ. ಹಬ್ಬದ ಸಮಯದಲ್ಲೂ ದೇಶದ ಹಲವೆಡೆ ಮಳೆ ಬರುವ ಸಾಧ್ಯತೆ ಹೆಚ್ಚಾಗಿದ್ದು, ದೀಪಾವಳಿಯ ಸಂಭ್ರಮಕ್ಕೆ ಕರಿನೆರಳು ಬೀಸಿದಂತಾಗಿದೆ. ಇದರ ನಡುವೆ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು, ದಕ್ಷಿಣ ಒಳನಾಡು ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಕೂಡ ಸಾಧಾರಣ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Karnataka Rain Expect Five Days Rain in Coastal and Malnad Region

ದಕ್ಷಿಣ ಒಳನಾಡು ಜಿಲ್ಲೆಗಳಿಗೆ ನವೆಂಬರ್ 03ರವರೆಗೆ ಸಾಧಾರಣ ಮಳೆ, ನಂತರ ತುಂತುರು ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 28 ರಿಂದ ನವೆಂಬರ್ 05 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ತುಂತುರು ಮಳೆಯಾಗುವ ಸಂಭವವಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಅಕ್ಟೋಬರ್ 31 ರಿಂದ ನವೆಂಬರ್ 03 ರವರೆಗೆ ಸಾಧಾರಣ ಮಳೆ, ಉಳಿದ ದಿನಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಕಳೆದ ಒಂದು ವಾರಗಳ ಹಿಂದ ಸುರಿದ ಹಿಂಗಾರು ಮಳೆಗೆ ಕರುನಾಡ ಜನತೆ ರೋಸಿ ಹೋಗಿದ್ದಾರೆ. ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಕ್ಟೋಬರ್ 31 ರಿಂದ ನವೆಂಬರ್ 1 ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಲಕ್ಷದ್ವೀಪ ಮತ್ತು ದಕ್ಷಿಣ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೇಶದ ಹಲವೆಡೆ ದೀಪಾವಳಿ ಹಬ್ಬದ ಸಮಯದಲ್ಲೇ ಮಳೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ದೆಹಲಿ, ಉತ್ತರ ಪ್ರದೇಶ ಮತ್ತು ಒಡಿಶಾದಲ್ಲಿ ಹವಾಮಾನ ಸ್ಪಷ್ಟವಾಗಿದ್ದರೂ, ಆಂಧ್ರಪ್ರದೇಶ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ, ವಿಶೇಷವಾಗಿ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅಕ್ಟೋಬರ್ 29 ರಂದು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಆಗಾಗ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 29 ರಿಂದ ನವೆಂಬರ್ 2 ರವರೆಗೆ ಕರ್ನಾಟಕದ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಅಕ್ಟೋಬರ್ 31 ರಿಂದ ನವೆಂಬರ್ 3 ರವರೆಗೆ ತಮಿಳುನಾಡು, ಪುದುಚೇರಿ ಮಳೆಯಾಗಬಹುದು ಎಂದು ತಿಳಿದು ಬಂದಿದೆ. ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಇನ್ನೂ ಮಳೆಯ ಅಬ್ಬರ ನಿಂತಿಲ್ಲ. ದೇಶದ ಕೆಲವೆಡೆ ಈಗಲೂ ಮಳೆಯಾಗುತ್ತಿದ್ದು, ದೀಪವಾಳಿ ಹಬ್ಬಕ್ಕೆ ವರುಣನ ಕರಿನೆರಳು ಬೀಳುವ ಸಾಧ್ಯತೆ ಹೆಚ್ಚಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+