Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕ ಮಳೆ!
ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ಹೇಳಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಉಡುಪಿ 88.5 ಮಿ.ಮೀ, ದಕ್ಷಿಣ ಕನ್ನಡ 72.5 ಮಿಮೀ, ಯುಕೆ 57.5ಮಿಮೀ, ಬೀದರ್ 54.5ಮಿ.ಮೀ, ಕಲಬುರಗಿ 48.5ಮಿ.ಮೀ, ಶಿವಮೊಗ್ಗ 42.5ಮಿ.ಮೀ, ಹಾಸನ 42ಮಿ.ಮೀ, ಚಿಕ್ಕಮಗಳೂರು 23ಮಿ.ಮೀ, ಕೊಡಗು 20.5ಮಿ.ಮೀ ಮಳೆಯಾಗಲಿದೆ.
ಉಡುಪಿ ಜಿಲ್ಲೆಯ ರೆಂಜಾಳ 88.5 ಮಿ.ಮೀ ಮಳೆಯಾಗಿದ್ದು ರಾಜ್ಯದಲ್ಲಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಅತ್ರಾಡಿ 79.5 ಮಿ.ಮೀ, ಮಣಿಪುರ 76.5ಮಿ.ಮೀ., ಕಾಂತಾವರ 72.5ಮಿ.ಮೀ., ಬಂದಾರು 72.5 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ
ದಕ್ಷಿಣ ಕನ್ನಡ, ಹಾಸನ, ಯಾದಗಿರಿ, ಮೈಸೂರು, ಉಡುಪಿ, ಮಂಡ್ಯ, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ರಾಮನಗರ, ಕೊಡಗು, ಬೀದರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕಲಬುರಗಿ, ವಿಜಯನಗರ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಚಾಮರಾಜನಗರ, ಕೋಲಾರ, ಕೊಪ್ಪಳ, ವಿಜಯಪುರ, , ಬಾಗಲಕೋಟೆ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ ಆದರೆ ಜಲಾಶಯಕ್ಕೆ ಒಳಹರಿವು ಹೆಚ್ಚಾಗುವಂತೆ ಮಳೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಬಿರುಸು ಪಡೆದರೆ ರಾಜ್ಯದ ಜಲಾಶಯಗಳಿಗೆ ಒಳಹರಿವು ಹಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು ನಗರದಲ್ಲಿ ಕೂಡ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ನಗರದ ಯಲಹಂಕ ಮತ್ತು ಪೂರ್ವ ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಾಸರಹಳ್ಳಿ, ರಾಜರಾಜೇಶ್ವರಿ ನಗರ, ಬೊಮ್ಮನಗಳ್ಳಿ ವಲಯ, ಮಹದೇವಪುರ ವಲಯದಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯಲ್ಲಿ ತಿಳಿಸಿದೆ.












Click it and Unblock the Notifications