ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ

Posted By: Gururaj
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 17 : ಕರಾವಳಿ, ಕೊಡಗು, ಉತ್ತರ ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಶನಿವಾರ ಭಾರೀ ಮಳೆಯಾಗಿದೆ. ವಿಜಯಪುರದಲ್ಲಿ ಪ್ರವಾಹಕ್ಕೆ ಸಿಲುಕಿ ಇಬ್ಬರು ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಬಳ್ಳಾರಿಯಲ್ಲಿ ಸಿಡಿಲು ಬಡಿದು 26 ಕುರಿಗಳು ಮೃತಪಟ್ಟಿವೆ.

ಬೆಂಗಳೂರಿನಲ್ಲಿ ಮುಂಜಾನೆಯೇ ಮಳೆ, ಜನರಿಗೆ ಕಿರಿಕಿರಿ

ಬೆಳಗಾವಿ ಜಿಲ್ಲೆಯ ಸವದತ್ತಿ, ಹುಕ್ಕೇರಿ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾದಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಮುಟಾದಲ್ಲಿ 90, ಹೊನ್ನಾವರದಲ್ಲಿ 46 ಮಿ.ಮೀ ಮಳೆ ಸುರಿದಿದೆ.

Karnataka rain forecast and water level of dams Sep 17, 2017

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಹಿರಿಯೂರು ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ವಿಜಯಪುರದ ತಾಳಿಕೋಟೆ ಬಳಿಯ ಡೋಣಿ ಸೇತುವೆ ಮೇಲೆ ಪ್ರವಾಹಸ ನೀರು ಹರಿಯುತ್ತಿತ್ತು. ಬೈಕ್ ಸವಾರರಿಬ್ಬರು ಈ ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಶಂಕೆ ಇದೆ.

ಚಾಮರಾಜನಗರ: ಬರಗಿಕೆರೆ ಏರಿ ಒಡೆದೀತು ಹುಷಾರು!

ಕೊಡಗು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆಯಿಂದ ಉತ್ತಮ ಮಳೆಯಾಗಿದೆ. ನಾಪೋಕ್ಲುವಿನಲ್ಲಿ ಮಳೆಯ ಆರ್ಭಟ ಹೆಚ್ಚಿತ್ತು. ಎರಡು ದಿನದಿಂದ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ನದಿಯ ನೀರಿನ ಮಟ್ಟ ಹೆಚ್ಚಾಗಿದೆ.

ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಣೆಕಟ್ಟುಗಳು ಗರಿಷ್ಠ ಮಟ್ಟ ಇಂದಿನ ಮಟ್ಟ
ಲಿಂಗನಮಕ್ಕಿ 1819.00 1795.35
ಸುಪಾ 1849.92 1792.68
ವಾರಾಹಿ 1949.50 1923.46
ಹಾರಂಗಿ 2859.00 2856.64
ಹೇಮಾವತಿ 2922.00 2887.75
ಕೆಆರ್‌ಎಸ್ 124.80 102.78
ಕಬಿನಿ 2284.00 2279.03
ಭದ್ರಾ 2158.00 2137.16
ತುಂಗಭದ್ರಾ 1633.00 1624.91
ಘಟಪ್ರಭಾ 2175.00 2156.28
ಮಲಪ್ರಭಾ 2079.50 2056.00
ಆಲಮಟ್ಟಿ 1704.81 1704.80
ನಾರಾಯಣಪುರ 1615.00 1614.45

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Meteorological department said rain will continue for at least the next 48 hours. Water level in almost all dams in Karnataka has increased considerably.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ