Karnataka Rain Forecast: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಆರ್ಭಟ!

Karnataka Rain Forecast: ಕರ್ನಾಟಕದ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆ ಅವಧಿಯಿಂದ ಉತ್ತಮ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗಿದೆ. ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಇನ್ನೂ ಮೂರರಿಂದ ನಾಲ್ಕು ದಿನಗಳ ಅವಧಿಗೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮಳೆ ಅಬ್ಬರ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಒಳನಾಡಿನಲ್ಲಿ ನೈರುತ್ಯ ಮುಂಗಾರು ಚುರುಕಾಗಿತ್ತು.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸರಾಸರಿ ಸಮುದ್ರ ಮಟ್ಟದಲ್ಲಿ ಮಾನ್ಸೂನ್ ಟ್ರಫ್ ಈಗ ಬಿಕನೇರ್, ಬನಸ್ತಲಿ ವಿದ್ಯಾಪೀಠ, ಒರ, ಸಿಧಿ, ಡಾಲ್ಗೊಂಗಂಜ್, ಬಂಕುರಾ ಮೂಲಕ ಪೂರ್ವಕ್ಕೆ ಮಣಿಪುರದ ಕಡೆಗೆ ಹಾದುಹೋಗುತ್ತದೆ. ನೈಋತ್ಯ ರಾಜಸ್ಥಾನ ಮತ್ತು ನೆರೆಹೊರೆಗಳ ಮೇಲೆ ಸುಳಿಗಾಳಿಯು ಈಗ ಮಧ್ಯ ರಾಜಸ್ಥಾನ ಮತ್ತು ನೆರೆಹೊರೆಗಳ ಮೇಲೆ ಇದ್ದು, ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ವಿಸ್ತರಿಸಿ, ನೈಋತ್ಯಕ್ಕೆ ಓರೆಯಾಗಿದೆ. ಸರಾಸರಿ ಸಮುದ್ರ ಮಟ್ಟದಲ್ಲಿ ಕರಾವಳಿಯ ವಾಯು ಒತ್ತಡದ ತಗ್ಗು ಈಗ ದಕ್ಷಿಣ ಗುಜರಾತ್‌ನಿಂದ ಉತ್ತರ ಕೇರಳದವರೆಗೆ ಸಾಗುತ್ತಿದೆ. ಉತ್ತರ ಕರ್ನಾಟಕದ ಒಳನಾಡಿನಿಂದ ದಕ್ಷಿಣ ಕರ್ನಾಟಕದ ಒಳನಾಡಿನಾದ್ಯಂತ, ಕೇರಳ ಮತ್ತು ತಮಿಳುನಾಡಿನಾದ್ಯಂತ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ಕೂಮೊರಿಯನ್ ಪ್ರದೇಶಕ್ಕೆ ಒಂದು ಮಾನ್ಸೂನ್ ಟ್ರಫ್ ಸಾಗುತ್ತದೆ ಇದರಿಂದ ಮುಂದಿನ ಒಂದು ವಾರದ ಅವಧಿಗೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಆರ್ಭಟ ಇರಲಿದೆ ಎಂದು ಐಎಂಡಿ ವರದಿಯು ಉಲ್ಲೇಖಿಸಿದೆ.

Karnataka Rain Forecast

ಕರ್ನಾಟಕದ ಈ ಭಾಗಗಳಲ್ಲಿ ಮಳೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನಲ್ಲಿ ಮಳೆ ಮುಂದುವರಿದಿದೆ. ಈ ಜಿಲ್ಲೆಗಳಲ್ಲಿ ಗಾಳಿಯ ವೇಗವು 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದ್ದು, ಗಂಟೆಗೆ 40-50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.
ಕೊಡಗು, ಹಾಸನ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಪ್ರಮಾಣದ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕರ್ನಾಟಕದ ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಎಚ್ಚರಿಕೆ ಕೊಡಲಾಗಿದೆ. ಕರ್ನಾಟಕ ಕರಾವಳಿಯ ಉದ್ದಕ್ಕೂ ಹಾಗೂ ಸಮೀಪದ ಸಮುದ್ರ ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಬಿರುಸಿನ ಗಾಳಿ ಬೀಸುವ ಸಾಧ್ಯತೆ ಇದೆ. ಗಾಳಿಯ ವೇಗವು ಕೆಲವೊಮ್ಮೆ ಗಂಟೆಗೆ 60 ಕಿ.ಮೀ.ವರೆಗೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ, ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.

ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ ?

ಇನ್ನು ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಆಗುವ ಮಳೆ ಆಗುತ್ತಿಲ್ಲವಾದರೂ, ಸಾಧಾರಣ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುತ್ತಿದೆ. ಮುಂದಿನ 24 ಗಂಟೆ ಅವಧಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32 ಡಿಗ್ರಿ ಸೆಲ್ಸಿಯಸ್ ಹಾಗೂ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+