Karnataka Rain: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿವೆ ನದಿಗಳು, ಜಲಾಶಯಕ್ಕೆ ಒಳಹರಿವು ಹೆಚ್ಚಳ

ಆರಂಭದಲ್ಲಿ ಮುಂಗಾರು ಕೊರತೆಯಾದ ಬಳಿಕ ರಾಜ್ಯದಲ್ಲಿ ಮಳೆ ಚುರುಕುಗೊಂಡಿದೆ, ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ನದಿಗಳು ತುಂಬಿಹರಿಯುತ್ತಿವೆ. ಕೆಲವು ನದಿಗಳಂತೂ ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಭಾನುವಾರ ಕೂಡ ರಾಜ್ಯದ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ, ಜಲಾಶಯಗಳಿಗೆ ನೀರಿನ ಮಟ್ಟ ಏರಿಕೆಯಾಗಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ.

 Karnataka Rain: Heavy Rain Causes Rising Reservoir Water Levels in State Districts

ಹೆಚ್ಚಿನ ಮಳೆಯಾದ ಕಾರಣ ಕೃಷಿ ಜಮೀನುಗಳು ಜಲಾವೃತಗೊಂಡಿದ್ದು, ಬೆಳೆಗಳಿಗೆ ಹಾನಿಯಾಗಿದೆ. ಮಹಾರಾಷ್ಟ್ರದಲ್ಲಿ ಕೂಡ ಹೆಚ್ಚಿನ ಮಳೆಯಾಗುತ್ತಿದ್ದು, ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಹಲವು ಗ್ರಾಮಗಳ 250ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಜೋಯಿಡಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಸೂಪಾ, ಕದ್ರಾ ಮತ್ತು ಕೊಡಸಳ್ಳಿ ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಕದ್ರಾ ಅಣೆಕಟ್ಟೆಯಿಂದ ಕಾಳಿ ನದಿಗೆ 71 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿರುವ ಕಾರಣ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಕೃಷ್ಣಾ ನದಿಯಲ್ಲಿ ಹೆಚ್ಚಿದ ಹರಿವು

ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಕೃಷ್ಣಾ ನದಿಯಲ್ಲಿ ಭಾರಿ ಪ್ರಮಾಣದ ನೀರು ಹರಿದುಬರುತ್ತಿದೆ. ಕೃಷ್ಣಾ ನದಿಯಲ್ಲಿ ಸದ್ಯ 1.07 ಲಕ್ಷ ಕ್ಯುಸೆಕ್ ಒಳ ಹರಿವು ಇದೆ. ಘಟಪ್ರಭಾ ನದಿಯಲ್ಲಿ 30 ಸಾವಿರ ಕ್ಯೂಸೆಕ್ ಹರಿವು ಇದೆ. ರಕ್ಕಸಕೊಪ್ಪ ಅಣೆಕಟ್ಟು ತುಂಬಲು ಇನ್ನು ನಾಲ್ಕು ಅಡಿಗಳಷ್ಟು ಕಡಿಮೆ ಇದೆ. ಮಾರ್ಕಂಡೇಯ ನದಿಗೆ ಹೆಚ್ಚಿನ ನೀರು ಹರಿಸುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಇರುವಂತೆ ಅಣೆಕಟ್ಟು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ತುಂಬಿ ಹರಿಯುತ್ತಿದೆ ಗೋಕಾಕ್ ಜಲಪಾತ

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ನಿಪ್ಪಾಣಿ ತಾಲೂಕಿನಲ್ಲಿ ಐದು ಮತ್ತು ಚಿಕ್ಕೋಡಿ ತಾಲೂಕಿನ ಒಂದು ಸೇತುವೆ ಜಲಾವೃತವಾಗಿದೆ. ಗೋಕಾಕ ಜಲಪಾತ ರಭಸವಾಗಿ ಧುಮ್ಮಿಕ್ಕುತ್ತಿದ್ದು, ಜಲಪಾತಗಳ ಪ್ರವೇಶವನ್ನು ನಿಷೇಧಿಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಸೋಮವಾರ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಅಳ್ನಾವರ ತಾಲೂಕಿನಲ್ಲಿ ಭಾನುವಾರ 50 ಮಿ.ಮೀ, ಕಲಘಟಗಿಯಲ್ಲಿ 45 ಮಿ.ಮೀ ಮಳೆ ದಾಖಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮೈದುಂಬಿಕೊಂಡ ಕಾವೇರಿ ನದಿ

ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಹಾರಂಗಿ ಜಲಾಶಯಕ್ಕೆ 31,000 ಕ್ಯೂಸೆಕ್ ಒಳಹರಿವು ಇದ್ದು, 25,500 ಕ್ಯೂಸೆಕ್ ನೀರು ಹೊರಬಿಡಲಾಗಿದೆ.

ಜಲಾಶಯದಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಯಡವನಾಡು, ಹುದುಗೂರು ಮತ್ತಿತರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಜೋರಾದ ಗಾಳಿಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ವರದಾ ನದಿಯ ನೀರು ಅಪಾರ ಪ್ರಮಾಣದ ಅಡಿಕೆ ತೋಟಗಳಿಗೆ ನೀರು ನುಗ್ಗಿದೆ. ಮುಂಡಗೋಡಿನ ಅಮ್ಮಾಜಿ ಟ್ಯಾಂಕ್ ತುಂಬಿ ಹರಿಯುತ್ತಿದ್ದು, ವಾಹನಗಳ ಓಡಾಟಕ್ಕೆ ತೊಂದರೆಯಾಗಿದೆ.

ಹಾಸನದಲ್ಲಿ ಭಾನುವಾರವೂ ಮಳೆಯ ಆರ್ಭಟ ಮುಂದುವರಿದಿದೆ. ಹೇಮಾವತಿ ನದಿಯ ಒಳಹರಿವು 12,088 ಕ್ಯುಸೆಕ್ ಇತ್ತು. ಚನ್ನರಾಯಪಟ್ಟಣ, ಅರಕಲಗೂಡು, ಅರಸೀಕೆರೆ, ಬೇಲೂರಿನಲ್ಲಿ ಸಾಧಾರಣ ಮಳೆಯಾಗಿದೆ.

ಕುಕ್ಕೆ ಸುಬ್ರಹ್ಮಣ್ಯದ ಯಾತ್ರಾಸ್ಥಳದ ಸ್ನಾನಘಟ್ಟ ಮುಳುಗಡೆಯಾಗಿದೆ. ನದಿಯ ಬಳಿಯ ಲಗೇಜ್ ಕೊಠಡಿ ಮತ್ತು ಶೌಚಾಲಯಗಳಿಗೆ ನೀರು ನುಗ್ಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದೆ. ಗಾಜನೂರು ಅಣೆಕಟ್ಟೆಯಿಂದ 50 ಸಾವಿರ ಕ್ಯೂಸೆಕ್‌ ನೀರು ಬಿಡಲಾಗುತ್ತಿದೆ. ಕೊಡಗು, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+