Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ

ಆಗಸ್ಟ್‌ನಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟ ಬಳಿಕ ರಾಜ್ಯದಲ್ಲಿ ಸೆಪ್ಟೆಂಬರ್ ನಲ್ಲಿ ಉತ್ತಮ ಮಳೆಯಾಗುತ್ತಿದ್ದು ಜನರಲ್ಲಿ ನೆಮ್ಮದಿ ಮೂಡಿಸಿದೆ. ಬುಧವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಗುರುವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.

ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬಲ್ಲಮಾವಟಿಯಲ್ಲಿ 78.5 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶವಾಗಿದೆ. ಬೆಂಗಳೂರಿನಲ್ಲಿ ಕೂಡ ಉತ್ತಮ ಮಳೆಯಾಗುತ್ತಿದ್ದು, ಬೊಮ್ಮನಹಳ್ಳಿಯಲ್ಲಿ 16.5 ಮಿಮೀ ಮಳೆಯಾಗಿದೆ.

Karnataka Rain: Heavy Rain Continue To Experience In This Districts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 77.5 ಮಿಮೀ ಮಳೆಯಾಗಿದ್ದು, ಮಂಡ್ಯ ಜಿಲ್ಲೆಯ ಬೆಕ್ಕಲಾಲೆಯಲ್ಲಿ 63 ಮಿಮೀ ಮಳೆಯಾಗಿದೆ. ಚಿಕ್ಕಮಗಳೂರು 61 ಮಿಮೀ, ಬೀದರ್ 55 ಮಿಮೀ, ಉಡುಪಿ 52.5 ಮಿಮೀ, ತುಮಕೂರು 52 ಮಿಮೀ, ಹಾಸನ 47 ಮಿಮೀ, ಉತ್ತರ ಕನ್ನಡ 46 ಮಿಮೀ, ಕಲಬುರಗಿ 42.5 ಮಿಮೀ, ಶಿವಮೊಗ್ಗ ಜಿಲ್ಲೆಯಲ್ಲಿ 40.5 ಮಿಮೀ ಮಳೆಯಾಗಿದೆ ಎಂದು ವರದಿಯಾಗಿದೆ.

ಇನ್ನೂ ಎರಡು ದಿನ ಭಾರಿ ಮಳೆ

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಮಳೆ ಬಿರುಸು ಪಡೆಯಲಿದೆ. ಕಲಬುರಗಿ, ಬೀದರ್, ಬಿಜಾಪುರ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ವಾರಾಂತ್ಯದಲ್ಲಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಬಿರುಸು ಪಡೆಯುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಲ್ಲಿ ಉತ್ತಮ ಮಳೆ

ಕೊಡಗು, ಬೀದರ್, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ತುಮಕೂರು, ಹಾಸನ, ಯಾದಗಿರಿ, ಉತ್ತರ ಕನ್ನಡ, ರಾಮನಗರ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಕಲಬುರಗಿ, ಶಿವಮೊಗ್ಗ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ವಿಜಯನಗರ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಕೊಪ್ಪಳ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೂಡ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಕೂಡ ಬುಧವಾರ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದ್ದು ಗುರುವಾರ ಕೂಡ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಬುಧವಾರ ಮಧ್ಯಾಹ್ನವೇ ನಗರದ ಹಲವು ಭಾಗಗಳಲ್ಲಿ ಮಳೆ ಆರಂಭವಾಗಿತ್ತು, ಗುರುವಾರ, ಶುಕ್ರವಾರ ಕೂಡ ಸಂಜೆ ವೇಳೆಗೆ ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+