Karnataka Weather: ಕರಾವಳಿ ಜಿಲ್ಲೆಗಳು ಸೇರಿ ಈ 13 ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳು ಕೂಡ ಉತ್ತಮ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಲೆನಾಡು ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

ರಾಜ್ಯದ 13 ಜಿಲ್ಲೆಗಳಿಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜುಲೈ 19ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಿಕೈನಲ್ಲಿ 235.5 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

 Karnataka Rain : Heavy Rain Continues In Coastal Districts And North Interior Karnataka

ಸಿದ್ದಾಪುರ ತಾಲೂಕಿನ ಹಲಗೇರಿ, ವಾಜಗೋಡು, ನೀಲಕುಂದ, ಬಿಳಗಿ, ಶಿವಳ್ಳಿ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ, ಸುಲಗೋಡು, ಸೋನಲೆ, ನೆರತೂರು, ತ್ರಿಣಿವೆ, ಅರಗ, ಬಿದರಗೋಡು, ಕೂಡುಮಲ್ಲಿಗೆ, ಚಿಕ್ಕಮಗಳೂರು ಜಿಲ್ಲೆಯ ಧಾರೆಕೊಪ್ಪ, ವಿದ್ಯಾರಣ್ಯಪುರ, ಬಣಕಲ್‌ನಲ್ಲಿ ಉತ್ತಮ ಮಳೆಯಾಗಿದೆ.

ಕೊಡಗು ಜಿಲ್ಲೆಯ ಹಾನಗಲ್ಲು, ಶನಿವಾರಸಂತೆ, ಬೇಲೂರು, ಶೆಟ್ಟಿಗೇರಿ, ಸೋಮವಾರಪೇಟೆ, ಸಕಲೇಶಪುರ ತಾಲೂಕಿನ ಮಳಲಿ, ಬಾಗೆ, ಕುರುಬತ್ತೂರು, ಬೀದರ್ ಜಿಲ್ಲೆಯ ಸಿಂಧೋಳ, ಭಾಲ್ಕಿ, ಕೋಸಂ, ಚಿತ್ತ, ಅಮಲಾಪುರದಲ್ಲಿ ಉತ್ತಮ ಮಳೆಯಾಗಿದೆ. ಉಡುಪಿ ಮತ್ತು ಬೆಳಗಾವಿ ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಕೂಡ ಉತ್ತಮ ಮಳೆ ಸುರಿದಿದೆ.

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಇನ್ನೂ ನಾಲ್ಕು ದಿನ ಮುಂದುವರೆಯಲಿದೆ. 55 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಮುದ್ರದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆ ಇದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ್ದು, ಸ್ಥಳೀಯರು ಮತ್ತು ಪ್ರವಾಸಿಗರಿಗೂ ಕೂಡ ಸಮದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

ಈ 13 ಜಿಲ್ಲೆಗಳಿಗೆ ಭಾರಿ ಮಳೆ

ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಕಲಬುರಗಿ, ಬೀದರ್, ಯಾದಗಿರಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಕೊಪ್ಪಳ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಿವಿಧ ಪ್ರದೇಶಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+