Karnataka Rain: ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಉತ್ತರ ಕರ್ನಾಟಕದ ಸ್ಥಿತಿ ಏನು?

ರಾಜ್ಯದಲ್ಲಿ ಶಾಖದ ತೀವ್ರತೆ ಹೆಚ್ಚಾಗಿದ್ದು ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು ಮತ್ತು ಮಳೆನಾಡು ಜಿಲ್ಲೆಗಳ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದೆ.

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಡಿಕೇರಿ ಸೇರಿದಂತೆ ಹಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಐಗೂರಿನಲ್ಲಿ ಕಳೆದ 24 ಗಂಟೆಯಲ್ಲಿ 45.5 ಮಿಮೀ ಮಳೆಯಾಗಿದೆ.

karnataka rains

ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಉತ್ತರ ಕರ್ನಾಟಕ ಭಾಗಗಳಲ್ಲಿ ಒಣ ಹವೆ ಮುಂದುವರೆಯಲಿದೆ, ಹೆಚ್ಚಿನ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ. ಬಿಸಿ ಗಾಳಿ ಹೆಚ್ಚಾಗಿದ್ದು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ ಮುನ್ಸೂಚನೆ

ಇನ್ನು ಬೆಂಗಳೂರಿನಲ್ಲಿ ಕೂಡ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಲಹಂಕ, ಮಹದೇವಪುರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರದ ಹಲವು ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ತಡವಾಗಿ ಮುಂಗಾರು ಆಗಮನ

ಈ ಬಾರಿ ಕೇರಳಕ್ಕೆ ಮುಂಗಾರು ಆಗಮನ ತಡವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ವಾಡಿಕೆಯಂತೆ ಜೂನ್ 1 ರಂದು ಮುಂಗಾರು ಕೇರಳಕ್ಕೆ ಅಪ್ಪಳಿಸುತ್ತದೆ, ಆದರೆ ಈ ಬಾರಿ 4 ದಿನ ತಡವಾಗಲಿದ್ದು, ಜೂನ್ 4 ರಂದು ಕೇರಳದಲ್ಲಿ ಮುಂಗಾರು ಆರಂಭವಾಗುತ್ತದೆ ಎಂದು ಹೇಳಿದೆ.

ಈ ಬಾರಿ ಭಾರತದಲ್ಲಿ ಮಳೆಯ ಪ್ರಮಾಣ ಉತ್ತಮವಾಗಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ಮಳೆಯ ಕೊರತೆ ಉಂಟಾಗುವುದಿಲ್ಲ, ಕೆಲವು ಭಾಗಗಳಲ್ಲಿ ಅತಿವೃಷ್ಠಿ ಉಂಟಾಗುವ ಸಾಧ್ಯತೆ ಇದೆಯಾದರೂ ದೇಶದ ಬಹುತೇಕ ಕಡೆಗಳಲ್ಲಿ ವಾಡಿಕೆಯಂತೆ ಮಳೆ ಸುರಿಯಲಿದೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+