Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ ಎಂದು ವರದಿಯಲ್ಲಿ ತಿಳಿಸಿದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

karnataka-rain

ಮಂಗಳವಾರ (ಸೆಪ್ಟೆಂಬರ್ 12) ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರದಲ್ಲಿ 76.5 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಉಳಿದಂತೆ ಉಡುಪಿ ಜಿಲ್ಲೆಯ ಮಡಾಮಕ್ಕಿ 71.5 ಮಿ.ಮೀ, ನಾಡ್ಪಾಲು 60 ಮಿ.ಮೀ, ಕಲಬುರಗಿಯ ರಾಜಾಪುರದಲ್ಲಿ 58 ಮಿಮೀ, ಶಿವಮೊಗ್ಗದ ಸುಳಗೋಡುವಿನಲ್ಲಿ 56 ಮಿಮೀ ಮಳೆಯಾಗಿದ್ದು ಉತ್ತಮ ಮಳೆಯಾದ ಪ್ರದೇಶ ಎನಿಸಿಕೊಂಡಿವೆ.

ಜಿಲ್ಲಾವಾರು ಮಳೆ ವಿವರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 76.5 ಮಿ.ಮೀ, ಉಡುಪಿ 71.5 ಮಿಮೀ, ಕಲಬುರಗಿ 58 ಮಿ.ಮೀ, ಶಿವಮೊಗ್ಗ 56 ಮಿ.ಮೀ, ಬೆಂಗಳೂರು ನಗರ 40.5 ಮಿ.ಮೀ, ಉತ್ತರ ಕನ್ನಡ 39 ಮಿ.ಮೀ, ಚಿಕ್ಕಮಗಳೂರು 37 ಮಿ.ಮೀ, ಯಾದಗಿರಿ 37 ಮಿ.ಮೀ, ರಾಯಚೂರು 31 ಮಿ.ಮೀ, ಕೊಡಗು 30 ಮಿ.ಮೀ, ರಾಮನಗರ 29 ಮಿ.ಮೀ, ವಿಜಯಪುರ 25.5 ಮಿ.ಮೀ, ತುಮಕೂರು 24 ಮಿ.ಮೀ, ಹಾಸನ 22 ಮಿ.ಮೀ. ಮಳೆಯಾಗಿದೆ.

ಈ ಜಿಲ್ಲೆಗಳಲ್ಲಿ ಉತ್ತಮ ಮಳೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಯಾದಗಿರಿ, ರಾಯಚೂರು, ಕೊಡಗು, ಕಲಬುರಗಿ, ಚಿಕ್ಕಮಗಳೂರು, ಗದಗ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು - ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಬೆಂಗಳೂರು ನಗರ, ತುಮಕೂರು, ಹಾಸನ, ಕೊಪ್ಪಳ, ವಿಜಯಪುರ, ವಿಜಯನಗರ, ಮಂಡ್ಯ, ಧಾರವಾಡ, ಬೆಳಗಾವಿ, ಬೀದರ್, ದಾವಣಗೆರೆ, ಮೈಸೂರು, ಹಾವೇರಿ, ಬಾಗಲಕೋಟೆ, ಚಿತ್ರದುರ್ಗ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರು ಮಳೆ ಮುನ್ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೂಡ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ಕೂಡ ನಗರದ ಹಲವು ಭಾಗಗಳಲ್ಲಿ ಹಗುರ ಮಳೆಯಾಗಿದ್ದು, ಮಂಗಳವಾರ ಮತ್ತು ಬುಧವಾರ ಸಂಜೆ ವೇಳೆಗೆ ಹಲವು ಭಾಗಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+