Rain Alert: ನವೆಂಬರ್ 10ರವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ!
ಕರ್ನಾಟಕದಲ್ಲಿ ಮುಂಗಾರು ಕೈಕೊಟ್ಟ ಬಳಿಕ ಹಿಂಗಾರು ಸ್ವಲ್ಪ ಚುರುಕುಗೊಂಡಿದ್ದು ಉತ್ತಮ ಮಳೆಗೆ ಕಾರಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಇನ್ನೂ ಎರಡು ದಿನ ಉತ್ತಮ ಮಳೆ ಬೀಳುವ ಸಾಧ್ಯತೆ ಇದೆ.
ನವೆಂಬರ್ 8 ಮತ್ತು 9 ರಂದು ರಾಜ್ಯದಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದ್ದು, ನವೆಂಬರ್ 10ರ ಬಳಿಕೆ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

ನವೆಂಬರ್ 8ರಂದು ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಂತರ, ಮಂಡ್ಯ, ಮೈಸೂರು, ಹಾಸನ, ಚಿಕ್ಕಮಗಳೂರು, ಬಳ್ಳಾರಿ, ದಾವಣಗೆರೆ, ಧಾರವಾಡ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 9ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ, ಧಾರವಾರ, ಮಂಡ್ಯ, ಬಳ್ಳಾರಿ, ರಾಯಚೂರು, ಕಲಬುರಗಿ, ವಿಜಯಪುರ, ದಾವಣಗೆರೆ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಉಳಿದಂತೆ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 10ರಂದು ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ತುಮಕೂರು, ದಾವಣಗೆರೆ, ಶಿವಮೊಗ್ಗ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ನವೆಂಬರ್ 11 ರಿಂದ 14 ರವರೆಗೆ ರಾಜ್ಯದಲ್ಲಿ ಬಹುತೇಕ ಒಣಹವೆ ಇರಲಿದ್ದು, ನವೆಂಬರ್ 15ರಿಂದ ಮತ್ತೆ ಮಳೆಯಾಗುವ ಮುನ್ಸೂಚನೆ ಇದೆ. ನವೆಂಬರ್ 15ರಂದು ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಹವಾಮಾನ ವರದಿ
ಸೋಮವಾರ ಮತ್ತು ಮಂಗಳವಾರ ಬೆಂಗಳೂರು ನಗರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಬುಧವಾರ ಮಳೆ ಪ್ರಮಾಣ ಕಡಿಮೆಯಾಗಲಿದೆ. ಮಂಗಳವಾರ ರಾತ್ರಿ ಕೂಡ ನಗರದ ಬಹುತೇಕ ಕಡೆ ಉತ್ತಮ ಮಳೆಯಾಗಿದ್ದು, 2015ರ ಬಳಿಕೆ ನವೆಂಬರ್ ತಿಂಗಳ ಅತ್ಯಂತ ತೇವವಾದ ದಿನ ಎನ್ನುವ ದಾಖಲೆ ಬರೆದಿದೆ.
ಮಂಗಳವಾರ ಬೆಂಗಳೂರಿನ ಸಂಪಂಗಿರಾಮನಗರ 21.5 ಮಿ.ಮೀ ಮಳೆಯಾಗಿದೆ. ಹಗದೂರು 20.5 ಮಿ.ಮೀ, ಬಾಣಸವಾಡಿ 18 ಮಿ.ಮೀ, ರಾಜಮಹಲ್ ಗುಟ್ಟಹಳ್ಳಿ 18 ಮಿ.ಮೀ, ಕೆಂಗೇರಿ 14.5 ಮಿ.ಮೀ, ಚಾಮರಾಜಪೇಟೆ 14 ಮಿ.ಮೀ, ಕಾಟನ್‌ಪೇಟೆ 13.5 ಮಿ.ಮೀ, ಕಮ್ಮನಹಳ್ಳಿ 12 ಮಿ.ಮೀ, ಕುಶಾಲನಗರ 12 ಮಿ.ಮೀ, ವನ್ನರ್ ಪೇಟೆ 10.5 ಮಿ.ಮೀ, ಕೊಟ್ಟಗೆಪಾಳ್ಯದಲ್ಲಿ 10 ಮಿ.ಮೀ ಮಳೆಯಾಗಿದೆ.












Click it and Unblock the Notifications