Karnataka Weather: ಅಕ್ಟೋಬರ್ 8 ರಿಂದ 21ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಅಕ್ಟೋಬರ್ 8 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಜೋರಾಗುವ ಮುನ್ಸೂಚನೆ ಸಿಕ್ಕಿದೆ. ಅಕ್ಟೋಬರ್ 1ರಿಂದ 8 ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುತ್ತಿದ್ದು, ಅಕ್ಟೋಬರ್ 8 ರಿಂದ ಮಳೆ ಚುರುಕಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ.

 Karnataka Rain : Heavy Rain Expected Karnatakas Coastal & Interior Regions from Oct 8 to 21

ರಾಜ್ಯದ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಘಟ್ಟಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ರಾಮನಗರ, ಉಡುಪಿ, ಉತ್ತರ ಕನ್ನಡ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬರ ನೀಗಿಸುತ್ತಾ ಈ ಬಾರಿಯ ಮಳೆ?

ರಾಜ್ಯದಲ್ಲಿ ಈ ಬಾರಿಯ ಮಳೆಗಾಲ ಸಂಪೂರ್ಣವಾಗಿ ವಿಫಲವಾಗಿದೆ. ಜಲಾಶಯಗಳು, ಕೆರೆ ಕಟ್ಟೆಗಳು ನೀರಿಲ್ಲದೆ ಬಣಗುಡುತ್ತಿವೆ, ಹಿಂಗಾರು ಉತ್ತಮವಾಗಿ ನಡೆಸಿದರೆ ಮಾತ್ರ ಬೇಸಿಗೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು ಸಿಗಲಿದ್ದು, ಇಲ್ಲವಾದರೆ ಕುಡಿಯು ನೀರಿಗೂ ಸಮಸ್ಯೆ ಉಂಟಾಗಲಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು ಈ ಭಾಗದ ರೈತರಲ್ಲಿ ಆಶಾಭಾವನೆ ಮೂಡಿಸಿದೆ. ಅಕ್ಟೋಬರ್ ಮಳೆ ಕೈಕೊಟ್ಟರೆ ಬೆಂಗಳೂರು ನಗರಕ್ಕೂ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಲಿದೆ.

ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ

ವಾರಾಂತ್ಯದಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶುಕ್ರವಾರ ಮತ್ತು ಶನಿವಾರ ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ದಾವಣಗೆರೆ, ಉಡುಪಿ, ಶಿವಮೊಗ್ಗ, ಗದಗ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಯಲಹಂಕ ಮತ್ತು ದಾಸರಹಳ್ಳಿ ವಲಯದಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+