Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆರಾಯ ತಂಪೆರೆಯುತ್ತಿದ್ದಾರೆ. ಇದೀಗ ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವೆಲ್ಲ ಭಾಗಗಳಲ್ಲಿ ಮಳೆ ಬೀಳಲಿದೆ ಹಾಗೂ ಎಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಈಗಾಗಲೇ ಹಲವು ಜಿಲ್ಲೆಗಳಲ್ಲಿ ಆಗಾಗ ಮಳೆಯಾಗುತ್ತಿದ್ದು, ಮತ್ತೇ ಆಡಿದ್ದೇ ಆಟ ಎಂಬುವಂತೆ ಬಿಸಿಲಿನ ವಾತಾವರಣ ಮುಂದುವರೆಯುತ್ತಿದೆ. ಇದರಿಂದ ಜನರು ಮನೆಯಲ್ಲೂ ಇರಲಾಗದೇ, ಹೊರಗಡೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ನಡುವೆಯೂ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Rain Heavy rain forecast at these districts in next 24 hours

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ತುಮಕೂರು, ಮಂಡ್ಯ, ಉಡುಪಿ, ಬಳ್ಳಾರಿಯ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಮಾತ್ರ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.

ಇನ್ನು ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು ಕೊಡಗು, ದಕ್ಷಿಣ ಕನ್ನಡ, ಮೈಸೂರು, ರಾಮನಗರ, ರಾಯಚೂರು ಕಲಬುರಗಿ, ಹಾಸನ, ಯಾದಗಿರಿ ಜಿಲ್ಲೆಗಳ ಹಲವೆಡೆ ಮಾತ್ರ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.

ಕೊಪ್ಪಳ, ಬೆಳಗಾವಿ, ವಿಜಯನಗರ, ಬೆಳಗಾವಿ, ಕೊಪ್ಪಳ, ಗದಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಕೆಲವೆಡೆ ಮಾತ್ರ ಅತೀ ಕಡಿಮೆ ಸಾಧಾರಣ ಬೀಳಲಿದೆ ಎನ್ನುವ ಮುನ್ಸೂಚನೆ ನೀಡಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+