Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 23ರವರೆಗೆ ಭರ್ಜರಿ ಮಳೆ: ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು, ಮೇ 19: ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯ 14 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಬೆಂಗಳೂರು, ಶಿವಮೊಗ್ಗ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ,ಕೋಲಾರ, ಮಂಡ್ಯ,ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮೇ 20ರಂದು ಕೂಡ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ವೇಳೆ ಮಳೆಯಾಗುವ ನಿರೀಕ್ಷೆ ಇದೆ.
ಮದ್ದೂರು, ಚಿಕ್ಕಮಗಳೂರು,ಬಂಡೀಪುರ, ತುಮಕೂರು, ಕೂಡಲಸಂಗಮ, ಪೊನ್ನಂಪೇಟೆ, ವಿರಾಜಪೇಟೆ, ಶಿವಮೊಗ್ಗ, ಹೊಸದುರ್ಗ,ಹೊಸಕೋಟೆ, ಮಂಗಳೂರು, ಕಮ್ಮರಡಿ, ರಾಣೆಬೆನ್ನೂರು, ಮಂಡ್ಯ, ಕೃಷ್ಣರಾಜಪೇಟೆ, ಯುಗಟಿ, ಸಕಲೇಶಪುರ, ಮೂರ್ನಾಡು, ಧಾರವಾಡ, ಮಧುಗಿರಿ, ಬಾಗಲಕೋಟೆ, ನಾಗಮಂಗಲ, ಕೊಪ್ಪ, ಚಿತ್ರದುರ್ಗ, ಮೈಸೂರ ಜಿಲ್ಲೆಯಲ್ಲಿ ಮಳೆಯಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಗುಲ್ಬರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ಉಡುಪಿ, ಹಲವೆಡೆ ಇಂದು ಗುಡುಗು,ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications