Karnataka Weather: ಮತ್ತೆ ಮಳೆರಾಯನ ಆಗಮನ; ಯಾವ ಜಿಲ್ಲೆಗಳಲ್ಲಿ ಮಳೆ: ಹವಮಾನ ಇಲಾಖೆ ಮುನ್ಸೂಚನೆ ಏನು?
ಬೆಂಗಳೂರು, ಆಗಸ್ಟ್ 21: ಈ ವರ್ಷ ಮಳೆರಾಮನ ಆಗಮನವೇ ತಡವಾಗಿದ್ದು, ಆಗಸ್ಟ್ ತಿಂಗಳ ಆರಂಭದಲ್ಲೇ ಕೈ ಕೊಟ್ಟ ಮಳೆಯಿಂದಾಗಿ ಹಲವು ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿದಿದೆ. ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಮಳೆರಾಯನ ಆಗಮನವಾಗಲಿದೆ ಎಂದು ತಿಳಿದು ಬಂದಿದೆ.
ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆ ಹಾಗೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.

ಇನ್ನೂಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮತ್ತೆ ಮಳೆ ಶುರುವಾಗಿದೆ. ರಾಜ್ಯದ ಬಹುತೇಕ ಪ್ರದೇಶದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಆಗಸ್ಟ್ ಆರಂಭದಿಂದಲೂ ಮಳೆಯಾಗದ ಹಿನ್ನಲೆ ರಾಜ್ಯದಲ್ಲಿ ಮಳೆ ಕೊರತೆ ಉಂಟಾಗಿದ್ದು, ಮತ್ತೆ ವರುಣನ ಆಗಮನವಾಗಲಿದೆ.
ಉತ್ತರ ಒಳನಾಡು ಭಾಗದಲ್ಲಿ ಹಗುರವಾಗಿ ಮಳೆಯಾಗಿರುವ ವರದಿಗಳು ಬಂದಿವೆ. ಇನ್ನುಳಿದಂತೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದ್ದು, ಜನರಿಗೆ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆ ಹಾಗೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಹೇಳಿದೆ.
ಇನ್ನೂ ಮಳೆ ಕಡಿಮೆಯಾಗಿದ್ದರಿಂದ ಆಗಸ್ಟ್ ಮೊದಲ ಎರಡು ವಾರದಲ್ಲಿ ಬಿಸಿಲು ಸಹ ಹೆಚ್ಚಾಗಿತ್ತು. ಮಳೆಗಾಲದಲ್ಲಿಯೂ ಗರಿಷ್ಠ 30 ರಿಂದ 33 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ದಾಖಲಾಗಿತ್ತು. ಇದೀಗ ಮತ್ತೆ ಮಳೆ ಆರಂಭವಾಗಿದ್ದು, ರೈತರಿಗೆ ನಿಟ್ಟೂಸಿರು ಬಿಟ್ಟಂತಾಗಿದೆ. ಇನ್ನೂ ಈ ಮಧ್ಯೆ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಕೊಪ್ಪಳ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಸಾಧಾರಣ ಮಳೆಯಾಗಿದೆ.












Click it and Unblock the Notifications