Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಸೆ. 12 ರವರೆಗೆ ಮಳೆ! ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು, ಸೆಪ್ಟೆಂಬರ್ 06: ರಾಜ್ಯದಲ್ಲಿ ಸೆಪ್ಟೆಂಬರ್ ಮೊದಲ ದಿನದಿಂದಲೂ ಮುಂಗಾರು ಚುರುಕುಗೊಂಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ 12ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಇನ್ನೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಬಹಳಷ್ಟು ಮಳೆಯಾಗಲಿದೆ. ಅಲ್ಲದೇ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೇಡಂನಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಇನ್ನೂ ಕೆಲ ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಬೀದರ್, ಕೋಟ, ಚಿಂಚೋಳಿ, ಬೆಳ್ತಂಗಡಿ, ಅಡಕಿ, ಔರಾದ್, ಮುಧೋಳ, ನೆಲೋಗಿ, ಕಕ್ಕೇರಿ, ಹುಣಸಗಿ, ಕೆಂಭಾವಿ, ಮಂಠಾಳ, ಮುಡಬಿ, ಭಾಲ್ಕಿ, ಇಳಕಲ್, ಕುಡತಿನಿ, ಕಂಪ್ಲಿ, ಕುಂದಾಪುರ, ಧರ್ಮಸ್ಥಳ, ಶೋರಾಪುರ, ಸೈದಾಪುರ, ಯಡ್ರಾಮಿ, ಚಿತ್ತಾಪುರ, ಬಿಳಗಿ, ಕುಷ್ಟಗಿ, ನಲ್ವತವಾಡ, ಸಿಂದಗಿ, ತಾಳಿಕೋಟೆ, ಹುಮನಾಬಾದ್, ಮುದಗಲ್, ಗಬ್ಬೂರು, ಚಿಕ್ಕಬಳ್ಳಾಪುರ, ತೊಂಡೇಭಾವಿ, ಗೋಕರ್ಣ, ಉಪ್ಪಿನಂಗಡಿ, ಮಂಗಳೂರು, ಜೇವರ್ಗಿ,ಆಳಂದ, ಖಜೂರಿ, ಅಫಜಲ್ಪುರ, ಗುಂಡಗುರ್ತಿ, ಕವಡಿಮಟ್ಟಿ, ಅಥಣಿ, ನಿಪ್ಪಾಣಿ, ಸಂಕೇಶ್ವರ, ನರಗುಂದ, ರೋಣ, ಕಲಬುರಗಿ, ಬಸವನ ಬಾಗೇವಾಡಿ, ಸಂಡೂರು, ಗೌರಿಬಿದನೂರು, ಚಿಂತಾಮಣಿ, ಬಳ್ಳಾರಿ, ಬೆಂಗಳೂರು, ಶಿವಮೊಗ್ಗ, ತರೀಕೆರೆಯಲ್ಲಿ ಮಳೆಯಾಗಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಮಲೆನಾಡು ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಸೆ.7, 8ರಂದು ಕಲಬುರಗಿ, ವಿಜಯಪು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಆಗಲಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನೂ ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, ಮಂಗಳವಾರ ಧಾರಾಕಾರ ಮಳೆಯಾಗಿದೆ. ಎರಡು ದಿನಗಳ ಕಾಲ ಬೆಂಗಳೂರಿನಗ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications