Karnataka Rains: 6 ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು, ಜೂನ್ 21: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕಳೆದ ಬಾರಿಗಿಂತ ಉತ್ತಮವಾಗಿ ಸುರಿಯಲಿದೆ ಎಂದು ಅಂದಾಜಿಸಲಾಗಿದೆ. ಕಳೆದ ವರ್ಷ ನಿರೀಕ್ಷಿಸಿದ್ದಕ್ಕಿಂತ 4 ದಿನಗಳ ಮುಂಚೆಯೇ ಅಂದ್ರೇ ಜೂನ್ 4ಕ್ಕೆ ಭಾರತಕ್ಕೆ ಎಂಟ್ರಿ ಕೊಟ್ಟಿದ್ದ ಮಾನ್ಸೂನ್ ಮಾರುತ, ಈ ವರ್ಷ ಮೇ ತಿಂಗಳಿನಲ್ಲಿಯೇ ಆರಂಭವಾಗಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ಕಳೆದ 15 ದಿನಗಳ ಕಾಲ ಭರ್ಜರಿ ಮಳೆಯಾಗಿದೆ. ಜೂನ್, ಜುಲೈ, ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ತಜ್ಞರು ಹೊಂದಿದ್ದಾರೆ.
ಇನ್ನೂ ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚು ಮಳೆಯ ಮುನ್ಸೂಚನೆ ಇರುವುದರಿಂದ ರೈತರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಭಾರೀ ಅನುಕೂಲ ಆಗಲಿದೆ. ಇನ್ನೂ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಹಾಗೈ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇದೀಗ ಬೆಂಗಳೂರು ಸೇರಿದಂತೆ ಹಲವೆಡೆ ಜೂನ್ 26ರವರೆಗೆ ಮಳೆ ಮುಂದುವರೆಯಲಿದೆ.

ಈ ವರ್ಷ ಮುಂಗಾರು ಮಳೆ ಜೋರಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇನ್ನೂ 6 ದಿನ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳಕೊಲ್ಲಿ ಸಮುದ್ರ ಭಾಗದಲ್ಲಿ ವಾಯುಮಾನ ಬದಲಾವಣೆ ಹಾಗೂ ವಾಯುಭಾರ ಕುಸಿತದಿಂದ, ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ ಭಾಗಗಳಲ್ಲೂ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಮೈಸೂರು, ಕೊಡಗು, ಶಿವಮೊಗ್ಗ, ಬೀದರ್, ಬಾಗಲಕೋಟೆ, ಕಲಬುರಗಿ, ಬೆಳಗಾವಿ, ಯಾದಗಿರಿ, ರಾಯಚೂರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಕಳೆದ ಎರಡ್ಮೂರು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಕಡಿಮೆಯಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ, ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications