Karnataka Rain: ಒಂದು ವಾರ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ-ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

Karnataka Rain: ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮಳೆರಾಯ ತಂಪೆರೆಯುತ್ತಿದ್ದಾನೆ. ಹಾಗೆಯೇ ಇನ್ನು ಮುಂದಿನ ಒಂದು ವಾರ ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲವು ಜಿಲ್ಲೆಗಳಿಹೆ ಆರೆಂಜ್ ಅಲರ್ಟ್‌, ಇನ್ನು ಕೆಲವು ಜಿಲ್ಲಗಳಿಗೆ ಯೆಲ್ಲೋ ಆಲರ್ಟ್‌ ಘೋಷಣೆ ಮಾಡಿದೆ. ಹಾಗಾದರೆ ಯಾವೆಲ್ಲ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನ ಬುತೇಕ ಭಾಗಗಳಲ್ಲಿ ನಿನ್ನೆ (ಏಪ್ರಿಲ್‌ 19) ಅಬ್ಬರದ ಮಳೆ ಸುರಿದುದಿದ್ದು, ನಗರದಲ್ಲಿ ಇಂದು (ಮೇ 20) ಕೂಡ ಅಬ್ಬರದ ಮಳೆ ಸುರಿಯಲಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Karnataka Rain Heavy rain forecast in These districts for next one week from may 19

ಇನ್ನು ಇಂದಿನಿಂದ (ಮೇ 20) ಮುಂದಿನ 7 ದಿನಗಳ ಕಾಲ ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಭಾರೀ ಮಳೆ ಸುರಿಯುವ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ನೀಡಿದ್ದು, ಹಲವು ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಮೇ 20ರಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಉತ್ತರ ಕನ್ನಡ, ಹಾವೇರಿ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಮೇ 21ರಂದು ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಉತ್ತರ ಕನ್ನಡ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮೇ 22ರಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಿಸಲಾಗಿದ್ದು, ಮತ್ತೊಂದೆಡೆ ಕೊಡಗು, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನಯ ಗುಡ್ಡಗಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋ ಮೀಟರ್ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಈಗಾಗಲೇ ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ಜಿಲ್ಲಗಳಲ್ಲಿ ಜನಮೂಲಗಳಿಗೆ ಜೀವಕಳೆ ಬಂದಂತಾಗಿದೆ. ಅಲ್ಲದೆ, ಇಷ್ಟು ದಿನ ಬಿಸಿಲಿನ ಬೇಗೆಗ ಬೇಸತ್ತಿದ್ದ ಜನರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಮತ್ತೊಂದೆಡೆಚ ನೋಡುವುದಾದದರೆ, ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದು, ಇದರಿಂದ ಸಾಕಷ್ಟು ನಷ್ಟವೂ ಆಗಿ ಜನರು ಸಂಕಷ್ಟಕ್ಕೆ ಸಿಲುಕಿರುವಂತಹ ಪರಿಸ್ಥಿತಿಗಳು ಕೂಡ ನೀರ್ಮಾಣವಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+