Karnataka Rain: ಕೆಲವೇ ಕ್ಷಣಗಳಲ್ಲಿ ರಾಜ್ಯದ ಈ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ-ಎಲ್ಲೆಲ್ಲಿ?
Karnataka Rain: ಕಳೆದ ಎರಡು ದಿನಗಳಿಂದ ರಾಜ್ಯದ ಕೆಲವೆಡೆ ಮಾತ್ರ ಜಿನುಗು ಮಳೆಯಾಗಿದೆ ಬಿಟ್ಟರೆ ಬಹುತೇಕ ಜಿಲ್ಲೆಗಳಲ್ಲಿ ಬಿರುಬಿಸಿಲಿನ ವಾತಾವರಣವೇ ಮುಂದುವರೆದಿದೆ. ಇದರ ನಡುವೆಯೂ ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಿಗೆ ಮಳೆರಾಯ ತಂಪೆರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವೆಲ್ಲಾ ಭಾಗಗಳಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬಿಸಿಲಿನ ಬೇಗೆಯಿಂದ ಬೆಂದಿದ್ದ ರಾಜ್ಯ ರಾಜಧಾನಿಗೆ ಕಳೆದ ಎರಡು ದಿನಗಳಿಂದ ಸಂಜೆ ಸುಮಾರಿಗೆ ಮಳೆರಾಯ ತಂಪೆರೆದಿದ್ದಾನೆ. ಇನ್ನು ನಿನ್ನೆ (ಮೇ 03) ನಗರದಲ್ಲಿ ಮಧ್ಯಾಹ್ನದ ವೇಳೆಗೆ ಮೋಡ ಕವಿದ ಹಿನ್ನೆಲೆ ಕತ್ತಲಿನ ವಾತಾವರಣ ನಿರ್ಮಾಣವಾಗಿದ್ದು, ಇದಕ್ಕಿದ್ದಂತೆಗೆ ಗುಡುಗು, ಸಿಡಿಲು ಸಹಿತ ಮಳೆ ಆರಂಭವಾಯಿತು. ಇದರಿಂದ ಒಂದೆಡೆ ಜನರಿಗೆ ಸಂತಸ ಮೂಡಿಸಿದರೆ, ಇನ್ನು ಕೆಲವೆಡೆ ಸಣ್ಣಪುಟ್ಟ ಅನಾಹುತಗಳು ಸಂಬವಿಸಿದ್ದವು.

ಇನ್ನು ಇಂದು (ಮೇ 04) ಬೆಳಗ್ಗೆಯಿಂದಲೂ ಬಿಸಿಲಿನ ವಾತಾವರಣವೇ ಮುಂದುವರೆದಿದ್ದು, ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ನಗರದಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ನೀಡಿದೆ.
ಅಷ್ಟೇ ಅಲ್ಲದೆ ಇನ್ನೂ ಕೆಲವೇ ಕ್ಷಣಗಳಲ್ಲಿ ಗಡಿಜಿಲ್ಲೆ ಚಾಮರಾಜನಗರ, ಕೋಲಾರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆರಾಯ ಅಬ್ಬರಿಸಿ ಬೊಬ್ಬೆರೆಯಲಿದ್ದಾನೆ ಎಂದು ಬೆಂಗಳೂರು ಹವಾಮಾನ ಕಚೇರಿ ತನ್ನ ಅಧಿಕೃತ ಟ್ವೀಟ್ ಮೂಲಕ ಮಾಹಿತಿ ರವಾನಿಸಿದೆ.
ಮಳೆ ಮುನ್ಸೂಚನೆ: ಮುಂದಿನ 3 ಗಂಟೆಗಳಲ್ಲಿ ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ
— Karnataka Weather (@Bnglrweatherman) May 4, 2024
ಮೂಲ- ಐಎಂಡಿ ಬೆಂಗಳೂರು
Issued on: 04 May, 14:30
Validity Time: 04 May, 17:30#KarnatakaRains pic.twitter.com/5TdNDzmkZh












Click it and Unblock the Notifications