Karnataka Rain: ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ-ಯೆಲ್ಲೋ ಅಲರ್ಟ್‌ ಘೋಷಣೆ

Karnataka Rain: ರಾಜ್ಯದ ಹಲವು ಭಾಗಗಳಲ್ಲಿ ಮಳೆರಾಯನ ಬಿಟ್ಟುಬಿಡದೇ ಆರ್ಭಟಿಸುತ್ತಿದ್ದಾರೆ. ಹಾಗೆಯೇ ಇಂದು (ಮೇ 26) ಇನ್ನು ಕಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಅಬ್ಬರದ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಹಲವೆಡೆ ಎರಡು ದಿನ ಇದೇ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ (ಮೇ 26) ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಎಲ್ಲೋ ಕೆಲವೆಡೆ ಮಾತ್ರ ಜಿನುಗು ಮಳೆಯಾಗಿದೆ. ಇನ್ನು ಇಂದು (ಮೇ 26) ಕೂಡ ನಗರದ ಬಹತೇಕ ಭಾಗದಲ್ಲಿ ಬೆಳಗ್ಗೆಯೇ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮಳೆರಾಯ ಅಬ್ಬರಿಸುವ ಎಲ್ಲಾ ಲಕ್ಷಣಗಳು ಎದ್ದು ಕಾಣುತ್ತಿವೆ.

Karnataka Rain Heavy rain forecast in these districts in few moments on May 26

ಎರಡು ದಿನ ಭಾರಿ ಮಳೆ: ಭಾನುವಾರದಿಂದ ಸೋಮವಾರ ಬೆಳಗ್ಗೆವರೆಗೆ (ಮೇ 26 & 27) ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಇತರೆ ಭಾಗಗಳಲ್ಲೂ ಸಾಧಾರಣ ಮಳೆ ಸುರಿಯುವ ಸಾಧ್ಯೆತೆಯಿದೆ. ಬೆಂಗಳೂರು ನಗರದಲ್ಲೂ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಭಾರೀ ಮಳೆ ಸುರಿದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಂದು ಎಲ್ಲೆಲ್ಲಿ ಮಳೆ?: ಇಂದು (ಮೇ 26) ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಬೀಳಲಿದೆ. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯೂ ಆಗಲಿದೆ. ಅದೇ ರೀತಿ ಬೆಂಗಳೂರು ನಗರ, ರಾಮನಗರ, ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಆಗುವ ಸಾಧ್ಯತೆಯಿದೆ. ಈ ವೇಳೆ ಗಾಳಿಯ ವೇಗವು 40 ರಿಂದ 50 ಕಿಲೋ ಮಿಟರ್‌ ಇರಲಿದೆ.

ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ದಕ್ಷಿಣ ಭಾಗದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆ ಬೀಳುವ ನಿರೀಕ್ಷೆಯಿದೆ. ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು,ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಕೂಡ ಮಳೆ ಸುರಿಯುವ ಸಾಧ್ಯತೆಯುದೆ. ಇನ್ನು ಬೀದರ್‌. ಗದಗ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

ತಾಪಮಾನ ದಾಖಲೆ ವಿವರ: ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ದಾಖಲಾಗಲಿದೆ ಎಂದು ತಿಳಿಸಿದೆ. ಇನ್ನು ಈಗಾಗಲೇ ಭಾರೀ ಮಳೆ ಹಿನ್ನೆಲೆ ಉತ್ತರ ಕನ್ನಡ ಸೇರಿದಂತೆ ಹಲವು ಭಾಗದಲ್ಲಿ ತಾಪಮಾನದ ಪ್ರಮಾಣ ಕಡಿಮೆಯಾಗಿದೆ. ಆದರೂ ರಾಯಚೂರಿನಲ್ಲಿ ಮಾತ್ರ ಶನಿವಾರ (ಮೇ 25) 40 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ ಜಿಲ್ಲೆಯ ಹಲವೆಡೆ, ಕೊಡಗು ಜಿಲ್ಲೆ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಶುಕ್ರವಾರ ರಾತ್ರಿ ಹಾಗೂ ಶನಿವಾರ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 19 ಸೆಂಟಿ ಮೀಟರ್‌, ಉಡುಪಿಯಲ್ಲಿ 13 ಸೆಂಟಿ ಮೀಟರ್‌ನಷ್ಟು ಮಳೆ ಬಿದ್ದಿದೆ ಎಂದು ವರದಿ ಆಗಿದೆ. ಕೊಡಗಿನ ಕುಶಾಲನಗರದಲ್ಲಿ 10 ಸೆ.ಮೀ, ಚಿಕ್ಕಮಗಳೂರಿನ ಕಳಸದಲ್ಲಿ 9 ಸೆ.ಮೀ, ಮಂಗಳೂರು ನಗರ, ಮಂಗಳೂರಿನ ಪಣಂಬೂರು, ಉಡುಪಿಯ ಸಿದ್ದಾಪುರದಲ್ಲಿ ತಲಾ 8 ಸೆ.ಮೀ., ಶಿವಮೊಗ್ಗದ ಆಗುಂಬೆ, ಚಿಕ್ಕಮಗಳೂರಿನ ತರೀಕೆರೆ, ಶೃಂಗೇರಿ, ಚಿತ್ರದುರ್ಗದ ನಾಯಕನಹಟ್ಟಿಯಲ್ಲಿ ತಲಾ 7 ಸೆ.ಮೀ ಮಳೆಯಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಹೀಗೆ ಮಳೆ ಮುಂದುವರೆದರೆ, ಜಲಮೂಲಗಳು ಭರ್ತಿಯಾಗಲಿದ್ದು, ಇದರಿಂದ ರೈತರ ಮುಖದಲ್ಲಿ ಮತ್ತಷ್ಟು ಮಂದಹಾಸ ಹೆಚ್ಚುವುದರಲ್ಲಿ ಯಾವುದೇ ಅನುಮಾನವಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+