Karnataka Rain: ಮುಂದಿನ ಎರಡು ದಿನ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮೂನ್ಸೂಚನೆ-ಎಲ್ಲೆಲ್ಲಿ?
Karnataka Rain: ರಾಜ್ಯದಲ್ಲಿ ನಿನ್ನೆ (ಮೇ 24) ಹಲವಡೆ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಇದರ ಪ್ರಭಾರ ರಾಜ್ಯದ ಮೇಲೂ ಬೀರುವ ಸಾಧ್ಯತೆಯಿದ್ದು, ಇಂದು ಮತ್ತು ನಾಳೆ (ಮೇ 25 & 26) ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರಿನಲ್ಲಿ ನಿನ್ನೆ ಬೆಳಗ್ಗೆಯಿಂದಲೂ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ರಾತ್ರಿ ಮಳೆರಾಯ ಹಲವೆಡೆ ಅಬ್ಬರಿಸಿದ್ದಾನೆ. ಅಲ್ಲದೆ ಇನ್ನು ಎರಡು ದಿನಗಳ ಕಾಲ ನಗರದಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಬೆಂಗಳೂರು ಸೇರಿ, ಚಾಮರಾಜನಗರ, ಕೊಡಗು, ಮೈಸೂರು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ, ಉಡುಪಿ, ಚಿಕ್ಕಮಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾರ ಅಬ್ಬರಿಸಿದ್ದು, ಇಂದು ಸಹ ಆರ್ಭಟ ಶುರು ಮಾಡಲಿದ್ದಾನೆ ಎಂದು ತಿಳಿಸಿದೆ.

ಮೇ 25ರಂದು ಎಲ್ಲೆಲ್ಲಿ ಮಳೆ ಆರ್ಭಟ?: ರಾಜ್ಯದಲ್ಲಿ ಇಂದು (ಮೇ 25) ಮಳೆಯ ಪ್ರಮಾಣ ಕಡಿಮೆ ಆಗಲಿದೆ ಎಂದು ತಿಳಿದುಬಂದಿದ್ದು, ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆ ಸುರಿಯಲಿದೆ. ಬೆಂಗಳೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್ ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಬೀಳುವ ಸಾಧ್ಯತೆ ಕಡಿಮೆಯಿದ್ದು, ಈ ಜಿಲ್ಲೆಗಳಲ್ಲಿ ಒಣಹವೆ, ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಮೇ 26ರಂದು ಎಲ್ಲೆಲ್ಲಿ ಮಳೆ?: ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮೇ 26ರ ಬೆಳಗ್ಗೆವರೆಗೂ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಕೆಲವು ಕಡೆ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ತಿಳಿಸಿದೆ.
ಕರ್ನಾಟಕದ ಉತ್ತರ ಒಳನಾಡಿನ ಗದಗ, ಹಾವೇರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಾತ್ರವೇ ಮಳೆಯಾಗಬಹುದು. ಉಳಿದಂತೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಕೆಲವು ಕಡೆ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಕೆಲವು ಕಡೆ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ವಿಜಯನಗರ, ಶಿವಮೊಗ್ಗ, ರಾಮನಗರ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಎಂದು ತಿಳಿಸಿದೆ.
ಬೆಂಗಳೂರು ನಗರದಲ್ಲಿ ಇಂದು (ಮೇ 25) ಬೆಳಗ್ಗೆಯೇ ಮೋಡ ಕವಿದ ವಾತಾವರಣ ಇದ್ದು, ಭಾರೀ ಮಳೆಯಾಗುವ ಎಲ್ಲಾ ಲಕ್ಷಣಗಳು ಎದ್ದು ಕಾಣುತ್ತಿವೆ. ಇನ್ನು ನಗರದಲ್ಲಿಂದು ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನು ಬೆಂಗಳೂರು ಗ್ರಾಮಾಂತರದಲಲ್ಲಿಯೂ ಕೂಡ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 25 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ. ಒಟ್ಟಿನಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುಚರೆದರೆ, ನದಿ, ಕೆರೆ, ಜಲಾಶಯ ಸೇರಿದಂತೆ ಹಲವು ಜಲಮೂಗಳಿಗೆ ಮತ್ತಷ್ಟು ಕಳೆ ಬಂದಂತಾಗುತ್ತದೆ. ಇನ್ನು ಬಿತ್ತನೆಗೆ ಸಜ್ಜಾಗಿರುವ ರೈತರ ಮುಖದಲ್ಲೂ ಮತ್ತಷ್ಟು ಮಂದಹಾಸ ಮೂಡಿದಂತಾಗುದೆ.












Click it and Unblock the Notifications