Karnataka Rain: ಮೇ 31ರವರೆಗೂ ರಾಜ್ಯದ ಈ ಭಾಗಗಳಲ್ಲಿ ಗುಡುಗು ಸಹಿತ ಅಬ್ಬರದ ಮಳೆ ಮುನ್ಸೂಚನೆ

Karnataka Rain: ಕಳದ ಮೂರು ವಾರಗಳಿಂದಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ತನ್ನ ಆರ್ಭಟವನ್ನು ಮುಂದುವರೆಸಿದ್ದಾನೆ. ಹಾಗೆಯೇ ಈ ತಿಂಗಳ ಕೊನೆಯವರೆಗೂ ಅಂದರೆ ಮೇ 31ರವರೆಗೂ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಧಾರಕಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಷ್ಟೇ ಮಳೆರಾಯ ಬಿಡುವುದು ನೀಡಿದ್ದು, ಇಂದು (ಮೇ 24) ಎಂಟ್ರಿ ಕೊಡುವ ಲಕ್ಷಣಗಳು ಗೋಚರಿಸುತ್ತಿವೆ. ನಗರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣ ಇದ್ದು, ಸಂಜೆ ವೇಳೆಗೆ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಈಗಾಗಲೇ ಮೈಸೂರು, ಕೊಡಗು, ಮೈಸೂರು, ದಾವಣಗೆರೆ, ಧಾರವಾಡ ಸೇರಿದಂತೆ ಹಲವು ಜಿಲ್ಲಗಳಲ್ಲಿ ಮಳೆರಾಯ ಆರ್ಭಟಿಸಿದ್ದಾನೆ. ಹಾಗೆಯೇ ಮೇ 31ರವರೆಗೂ ಹಲವು ಜಿಲ್ಲಗಳಲ್ಲಿ ಭಾರೀ ಮಳೆಯಾಗಲಿದ ಎಂದು ಮುನ್ಸೂಚನೆ ನೀಡಿದೆ.

Karnataka Rain Heavy rain forecast in these districts of state till May 31

ಈಗಾಗಲೇ ಕೇರಳದಲ್ಲಿ ಅಬ್ಬರದ ಮಳೆಯಾಗುತ್ತಿದ್ದು, ಪರಿಣಾಮ ಈ ಬಾರಿ ಕರ್ನಾಟಕಕ್ಕೆ ಮುಂಗಾರು ಬೇಗನೆ ಎಂಟ್ರಿ ಕೊಡುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕೇರಳದದಲ್ಲಿ ಚಂಡಮಾರುತದ ಪ್ರಭಾವ ಹಿನ್ನೆಲೆ ಭಾರೀ ಮಳೆ ಮುಂದುವರೆದಿದೆ. ಇನ್ನು ಮುಂದಿನ ದಿನಗಳಲ್ಲಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ತುಂತುರು ಮಳೆಯಾಗಲಿದೆ, ಕೆಲವು ಕಡೆ ಗುಡುಗು, ಮಿಂಚು ಸಹಿತ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರೀ ಮಳೆ ಮುನ್ಸೂಚನೆ: ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 4 ವಾರಗಳವರೆಗೆ ಮಲೆನಾಡು ಮತ್ತು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಮತ್ತು ಮುಂಗಾರು ಯಾವುದೇ ಅತೀ ಬೇಗ ಪ್ರವೇಶ ಮಾಡುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ ಎಂದು ತಿಳಿದುಬಂದುದೆ.

ಮೇ 31ರವರೆಗೆ ಮಳೆ ಮಳೆ: ಇನ್ನು ಇಂದು (24) ರಾಜ್ಯದಾದ್ಯಂತ ಮೇ 24 31ರವರೆಗಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡಗು ಸಹಿತ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಬೆಂಗಳೂರು ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ, ಮೇ 25ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ.

ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಈ ಭಾಗಗಳ ಕೆಲವೆಡೆ ಗಾಳಿಯ ವೇಗ ಗಂಟೆಗೆ 40-50 ಕಿಲೋ ಮೀಟರ್‌ ವೇಗದಲ್ಲಿ ಇರಲಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಈ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷ ಮಾಡಿದೆ. ಮತ್ತೊಂದೆಡೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಕಡೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ತಾಪಮಾನ ದಾಖಲೆಯ ವಿವರ: ಇನ್ನು ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು (ಮೇ 24) ಮೋಡಕವಿದ ವಾತಾವರಣ ಇರಲಿದ್ದು, ಹಲವೆಡೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ನಿನ್ನೆ (ಮೇ 23) ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 31.5 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 31.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 23.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಇನ್ನು ಹಲವೆಡೆ 0.2 ಮಿಲಿ ಮೀಟರ್‌ ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+