karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಅ. 24ರವರೆಗೂ ಭಾರೀ ಮಳೆ; ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು?
ಬೆಂಗಳೂರು, ಅಕ್ಟೋಬರ್ 21: ಕರ್ನಾಟಕದಲ್ಲಿ ಆರಂಭದಲ್ಲೇ ಮಳೆಯ ಕೊರತೆ ಉಂಟಾಗಿದ್ದು, ಮಳೆ ಇಲ್ಲದೇ ರಾಜ್ಯದಲ್ಲಿ ಭೀಕರ ಬರಗಾಲದಿಂದ ನಾಡಿನ ರೈತ ಕಂಗಾಲಾಗಿದ್ದಾನೆ. ಅಕ್ಟೋಬರ್ ಮೊದಲ ವಾರದಿಂದಲೂ ಹಿಂಗಾರು ಮಳೆ ಸಹ ವಿಳಂಬವಾಯಿತು. ಇದರಿಂದಾಗಿ ಕಳೆದ 20 ದಿನಗಳಲ್ಲಿ ಕರ್ನಾಟಕದಲ್ಲಿ 53% ರಷ್ಟು ಮಳೆ ಕೊರತೆ ಆಗಿದೆ.
ಇನ್ನೂ ರಾಜ್ಯದಲ್ಲಿ ಅಕ್ಟೋಬರ್ 24ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇಷ್ಟು ದಿನಗಳ ಮಳೆಯಾಗದ ಹಿನ್ನೆಲೆ ರಾಜ್ಯದ ಪ್ರಮುಖ ಜಲಶಾಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ, ಇನ್ನೂ ಅಕ್ಟೋಬರ್ 24 ರಿಂದ ಮೂರು ದಿನಗಳ ಕಾಲ ವರುಣ ಅಬ್ಬರಿಸಲಿದ್ದಾನೆ ಎಂದು ಹೇಳಲಾಗಿದೆ. ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆ ಪೂರ್ಣಗೊಂಡಿದ್ದು, ಹಿಂಗಾರು ಚುರುಕುಗೊಂಡಿದೆ.

ಕರ್ನಾಟಕದಲ್ಲಿ ನಿರೀಕ್ಷಿತ ಮುಂಗಾರು ಮಳೆ ಬಾರದೇ ಬರಗಾಲ ಉಂಟಾಯಿತು. ಆದರೆ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದೆ. ಮುಂದಿನ 3 ದಿನಗಳ ಕಾಲ ಕರಾವಳಿ, ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಗಳಿವೆ. ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಚಾಮರಾಜನಗರದಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲದೇ ಮೈಸೂರು, ಕೊಡಗು ಜಿಲ್ಲೆಗಳಲ್ಲಿ ತುಂಬಾ ಮಳೆ ಬರಲಿದೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಸಂಜೆ ವೇಳೆಗೆ ವರುಣನ ಅಬ್ಬರ ಹೆಚ್ಚಗಲಿದೆ ಎನ್ನಲಾಗಿದ್ದು, ಅದಕ್ಕೆ ಅಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಬೆಂಗಳೂರು ನಗರದಲ್ಲೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಮಳೆ ಸುರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.












Click it and Unblock the Notifications