Karnataka Rains: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಈ 17 ಜಿಲ್ಲೆಗಳಲ್ಲಿ ಮಳೆ: ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು, ಸೆಪ್ಟೆಂಬರ್‌ 25: ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಭರ್ಜರಿಯಾಗಿ ಬಂದಿದೆ. ಬಹುತೇಕ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಇದೀಗ ಮತ್ತೆ ಕರ್ನಾಟಕದಲ್ಲಿ ಮಳೆ ಜೋರಾಗಲಿದ್ದು, 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Karnataka Rain Heavy rain in next 3 days in 17 districts of Karnataka

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂಜಾನೆಯಿಂದಲೇ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಶಿವಮೊಗ್‌, ಚಿಕ್ಕಮಗಳೂರು ಜಿಲ್ಲೆಯ ಕೆಲ ಭಾಗಗಳಲ್ಲಿ ನಿನ್ನೆಯಿಂದಲೇ ಮಳೆಯಾಗುತ್ತಿದ್ದು, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ. ಹೊನ್ನಾವರ, ಗೋಕರ್ಣ, ಸಿದ್ದಾಪುರ, ಅಥಣಿ, ವಿಜಯಪುರ, ಮಂಕಿ, ಶಿರಾಲಿ, ಕುಂದಾಪುರ, ಬಸವನ ಬಾಗೇವಾಡಿ, ರಬಕವಿ, ಸುಳ್ಯ, ಕುಮಟಾ, ಕೂಡಲಸಂಗಮ, ಮಾಣಿ, ಕೋಟಾ, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಔರಾದ್, ಮುದ್ದೇಬಿಹಾಳ, ಕೊಟ್ಟಿಗೆಹಾರ, ಕಾರ್ಕಳ, ಅಂಕೋಲಾ, ಪಣಂಬೂರು, ಕಾರವಾರ, ಯಲಬುರ್ಗಾ, ಮಹಾಲಿಂಗಪುರ, ಮುದಗಲ್, ಕವಡಿಮಟ್ಟಿ, ಧಾರವಾಡ, ಜಯಪುರ, ಕಳಸ, ಧಾರವಾಡ, ಕುರ್ಡಿ, ಲಕ್ಷ್ಮೇಶ್ವರ, ಸೈದಾಪುರ, ಕೊಪ್ಪ, ತಿಪಟೂರು, ಬಾಳೆಹೊನ್ನೂರು, ಹಗರಿ ಬೊಮ್ಮನಹಳ್ಳಿ,ವೈಎನ್ ಹೊಸಕೋಟೆ, ಗೇರುಸೊಪ್ಪದಲ್ಲಿ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+