Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ

ಆಗಸ್ಟ್‌ ತಿಂಗಳಿನಲ್ಲಿ ಮಳೆ ಕೊರತೆ ಬಳಿಕ ತಿಂಗಳ ಕೊನೆಯ ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಉತ್ತಮ ಮಳೆಯಾಗುವ ಸೂಚನೆ ನೀಡಿದೆ. ಶುಕ್ರವಾರ ಸಂಜೆ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿಯಲ್ಲಿ ತಿಳಿಸಿದೆ.

karnataka-rain

ಆಗಸ್ಟ್ 31ರಂದು ರಾತ್ರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಸೆಪ್ಟೆಂಬರ್ 1ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತಿದೆ. ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ರಾತ್ರಿ ಕೂಡ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಂದು ತಿಂಗಳಿನಿಂದ ಮಳೆಗಾಗಿ ಕಾದಿದ್ದ ಜನತೆಗೆ ಸ್ವಲ್ಪ ಸಮಾಧಾನ ಸಿಕ್ಕಂತಾಗಿದೆ.

ಶುಕ್ರವಾರ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ಹಾವೇರಿ, ಬಳ್ಳಾರಿ, ಉಡುಪಿ, ಗದಗ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.

ಗುರುವಾರ ಸುರಿದ ಮಳೆ ವಿವರ

ಗುರುವಾರ ಸಂಜೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಕೋಲಾರ, ರಾಮನಗರ, ಮಂಡ್ಯ, ಬೆಳಗಾವಿ, ಚಿಕ್ಕಬಳ್ಳಾಪುರ, ಗದಗ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಗುರುವಾರ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಿಡಸಾಲೆಯಲ್ಲಿ 156 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಗುಬ್ಬಿ ತಾಲೂಕಿನ ಕಲ್ಲೂರಿನಲ್ಲಿ ಕೂಡ 134 ಮಿಮೀ ಮಳೆಯಾಗಿದೆ. ಬೆಂಗಳೂರು ನಗರದ ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್‌ನಲ್ಲಿ 152 ಮಿಮೀ ಮಳೆಯಾಗಿದೆ. ಗುಟ್ಟಹಳ್ಳಿಯಲ್ಲಿ 136 ಮಿಮೀ ಮಳೆಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ 149 ಮಿಮೀ ಮಳೆಯಾಗಿದೆ. ಚಳ್ಳಕೆರೆಯ ಸಿದ್ದೇಶ್ವರನದುರ್ಗದಲ್ಲಿ 65 ಮಿಮೀ ಮಳೆಯಾಗಿದೆ. ಕೋಲಾರದ ಅಮ್ಮನಲ್ಲೂರಿನಲ್ಲಿ 135 ಮಿಮೀ, ಶ್ರೀನಿವಾಸಪುರ 110 ಮಿಮೀ, ಪಿಚ್ಚಗುಂಟಲಹಳ್ಳಿ 107 ಮಿಮೀ ಮಳೆಯಾಗಿದೆ.

ರಾಮನಗರ ಜಿಲ್ಲೆಯ ಬಿಟ್ಟಸಂದ್ರದಲ್ಲಿ 130 ಮಿಮೀ, ಸುಳ್ಳೇರಿ 115, ಮಾಕಳಿ 103 ಮಿಮೀ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ 125 ಮಿಮೀ, ತ್ಯಾಮಗೊಂಡ್ಲು 122 ಮಿಮೀ, ಹೊನ್ನಾವರ 114 ಮಿಮೀ, ಮಧುರೆ 107 ಮಿಮೀ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+