Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ: ಎಲ್ಲೆಲ್ಲಿ?
ಬೆಂಗಳೂರು, ಜನವರಿ 06: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಮಂಜಿನ ವಾತಾವರಣ ಇರಲಿದೆ. ಸಂಜೆ ವೇಳೆಗೆ ನಗರದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ವರುಣನ ಆರ್ಭಟ ಜೋರಾಗಿ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಕರ್ನಾಟಕದ ಹಲವೆಡೆ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳ ಕಾಲ ಭರ್ಜರಿ ಮಳೆ ಬೀಳಲಿದೆ. ಮೈಸೂರು, ಕೊಡಗು, ಹಾಸನ, ರಾಮನಗರ, ತುಮಕೂರು, ವಿಜಯನಗರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಕಳೆದ ಮೂರು ತಿಂಗಳಿಂದ ಕರ್ನಾಟಕದಲ್ಲಿ ಭರ್ಜರಿ ಮಳೆ ಆಗಿದೆ. ಸುರಿದ ಭಾರೀ ಮಳೆಯಿಂದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳೆಲ್ಲ ಭರ್ತಿಯಾಗಿವೆ. ಅನ್ನದಾತರ ಮುಖದಲ್ಲಿ ಮಂದಹಾಸ ಕೂಡ ಮೂಡಿದಂತಾಗಿದೆ. ಮತ್ತೊಂದೆಡೆ ಹಲವೆಡೆ ಅತೀವೃಷ್ಠಿಯಿಂದಾಗಿ ಬೆಳೆಗಳೆಲ್ಲ ನಾಶವಾಗಿವೆ.
ಮುಂದಿನ 5 ದಿನಗಳ ಕಾಲ ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಮುಂಜಾನೆ ಸಾಧಾರಣ ಹಾಗೂ ಕೆಲವೆಡೆ ದಟ್ಟ ಮಂಜು ಆವರಿಸುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಕರ್ನಾಟಕದ ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಕಲ್ಬುರ್ಗಿ, ಹಾವೇರಿ ಮತ್ತು ರಾಯಚೂರು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮಂಡ್ಯ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿಕನಿಷ್ಠ ತಾಪಮಾನವು ವಾಡಿಕೆಗಿಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆಯಿದೆ.
15 ರಾಜ್ಯಗಳಲ್ಲಿ ಮತ್ತೆ ಭಾರೀ ಮಳೆ : IMD ಮುನ್ಸೂಚನೆ
ದೇಶದಾದ್ಯಂತ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗಿದ್ದು, ಈ ನಡುವೆ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಬಿಹಾರ, ಮಧ್ಯಪ್ರದೇಶ ಸೇರಿದಂತೆ ದೆಹಲಿ-ಎನ್‌ಸಿಆರ್ ರಾಜ್ಯಗಳಲ್ಲಿ ಕಳೆದ ಎರಡು ದಿನಗಳಿಂದ ತುಂಬಾ ದಟ್ಟವಾದ ಮಂಜು ಇದೆ. ಶೂನ್ಯ ಗೋಚರತೆಯಿಂದಾಗಿ, ಜನರು ವಾಹನ ಚಲಾಯಿಸಲು ತೊಂದರೆ ಎದುರಿಸುತ್ತಿದ್ದಾರೆ.
ಹವಾಮಾನ ಇಲಾಖೆ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತದ ಪರಿಣಾಮ ನವರಿ 6 ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ/ಹಿಮ ಬೀಳಲಿದೆ. ಇಂದು ಜನವರಿ 6 ಮತ್ತು ನಾಳೆ ಜನವರಿ 7 ರಂದು ಪಂಜಾಬ್, ಹರಿಯಾಣ, ಚಂಡೀಗಢದಲ್ಲಿ ಗುಡುಗು ಸಹಿತ ಅಲ್ಲಲ್ಲಿ ಮಳೆಯಾಗಬಹುದು. ಜನವರಿ 6 ರಂದು ವಾಯುವ್ಯ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಚದುರಿದ ಮಳೆ ಹಾಗೂ ಹಿಮ ಬೀಳಲಿದೆ.
ಜನವರಿ 7 ಮತ್ತು 8 ರಂದು ಈಶಾನ್ಯ ಭಾರತದ ಎಲ್ಲಾ 8 ರಾಜ್ಯಗಳು, ಕರ್ನಾಟಕ ತಮಿಳುನಾಡು, ಆಂಧ್ರಪ್ರದೇಶ ಸೇರಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜನವರಿ 6 ಮತ್ತು 7 ರಂದು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಶೀತ ದಿನದ ಪರಿಸ್ಥಿತಿಗಳು ಕಂಡುಬರುತ್ತವೆ. ಉತ್ತರ ಮಧ್ಯಪ್ರದೇಶ, ಬಿಹಾರ, ಉತ್ತರಾಖಂಡ, ಒಡಿಶಾ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ರಾಜಸ್ಥಾನ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ದಟ್ಟವಾದ ಮಂಜು ಮತ್ತು ಶೀತ ಅಲೆಗಳ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.












Click it and Unblock the Notifications